ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯರನ್ನು ಸೋಲಿಸಲು ಪ್ರತಿಪಕ್ಷಗಳ ತಂತ್ರ: ಯತೀಂದ್ರ

Last Updated 27 ಜನವರಿ 2023, 10:14 IST
ಅಕ್ಷರ ಗಾತ್ರ

ಕೊಪ್ಪಳ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಂದೆ ಸಿದ್ದರಾಮಯ್ಯ ಅವರನ್ನು ಸೋಲಿಸಲು ಪ್ರತಿಪಕ್ಷಗಳು ಇಲ್ಲಸಲ್ಲದ ತಂತ್ರ ಮಾಡುತ್ತಿವೆ’ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿದರು.

ಇಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಮುಖ್ಯಮಂತ್ರಿಯಾಗಿದ್ದವರಿಗೆ ನಿಶ್ಚಿತ ಕ್ಷೇತ್ರವಿಲ್ಲ ಎನ್ನುವುದು ಪ್ರತಿಪಕ್ಷಗಳ ಅಪಪ್ರಚಾರದ ತಂತ್ರದ ಭಾಗ. ರಾಜ್ಯದ ಎಲ್ಲಾ ಕ್ಷೇತ್ರಗಳಿಂದಲೂ ಅವರಿಗೆ ಆಹ್ವಾನಿವಿದೆ. ಕೊಪ್ಪಳದಿಂದಲೂ ಸ್ಪರ್ಧೆ ಮಾಡುವಂತೆ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ. ವರುಣಾ ಕ್ಷೇತ್ರಕ್ಕೆ ಯಾವಾಗಲೂ ಮುಕ್ತ ಆಹ್ವಾನ ಇದ್ದೇ ಇರುತ್ತದೆ’ ಎಂದರು.

’ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ಈಗಲೇ ಅಂತಿಮಗೊಳಿಸುವ ಅಗತ್ಯವಿಲ್ಲ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ನಿರ್ಧರಿಸಲಾಗುತ್ತದೆ. ಇದು ಅವರ ಕೊನೆಯ ಚುನಾವಣೆಯಾದ ಕಾರಣ ವರುಣಾದಿಂದಲೇ ಸ್ಪರ್ಧಿಸಿ ಗೆದ್ದು ಮೈಸೂರು ಜಿಲ್ಲೆಯ ಜನರ ಸೇವೆ ಮಾಡಬೇಕು ಎನ್ನುವ ಆಶಯ ನಮ್ಮದು. ಓಡಾಟಕ್ಕೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಬಾದಾಮಿಯಿಂದ ಸ್ಪರ್ಧೆ ಮಾಡದೇ ಇರಲು ತೀರ್ಮಾನಿಸಿದ್ದಾರೆ’ ಎಂದರು.

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ನಿಲ್ಲಬೇಕೆನ್ನುವ ದೇವಿಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ‘ದೇವಿ ನಮ್ಮ ಮನೆಯ ದೇವರು ಅಲ್ಲ. ನಾವು ತೆಗೆದುಕೊಳ್ಳುವ ನಿರ್ಧಾರಕ್ಕೂ, ದೇವಿಯ ಹೇಳಿಕೆಗೂ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT