ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕೊಪ್ಪಳ | ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

Published : 30 ಜೂನ್ 2025, 16:03 IST
Last Updated : 30 ಜೂನ್ 2025, 16:03 IST
ಫಾಲೋ ಮಾಡಿ
Comments
ಉದ್ದೇಶಿತ ಸಕ್ಕರೆ ಕಾರ್ಖಾನೆ ಜಾಗ ಈಗಾಗಲೇ ಎನ್‌.ಎ. ಆಗಿದೆ. ಗ್ರಾಮಸ್ಥರು ಅಲ್ಲಿ ಕಾರ್ಖಾನೆ ಸ್ಥಾಪನೆ ಬೇಡ ಎನ್ನುತ್ತಿದ್ದಾರೆ. ಕೂಲಂಕುಷವಾಗಿ ಪರಿಶೀಲಿಸಿ ಸರ್ಕಾರದ ಗಮನಕ್ಕೆ ತರಲಾಗುವುದು.
ಸುರೇಶ ಇಟ್ನಾಳ ಜಿಲ್ಲಾಧಿಕಾರಿ
ಸಕ್ಕರೆ ಕಾರ್ಖಾನೆ ಬಂದ್ ಮಾಡಿಸಲು ಕ್ರಮ: ಹಿಟ್ನಾಳ
ಕೊಪ್ಪಳ: ‘ನಮ್ಮ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಬೇಡವೆಂದು ಸ್ಥಳೀಯರು ಮನವಿ ಮಾಡಿದ್ದಾರೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಸ್ಥಾಪನೆ ನಿಲ್ಲಿಸಲು ಕ್ರಮ ಕೈಗೊಳ್ಳುವೆ’ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಭರವಸೆ ನೀಡಿದರು. ಸೋಮವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕಂಪನಿಯವರು ರೈತರಿಗೆ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಗಮನಕ್ಕೆ ತರದೇ ಜಮೀನು ಖರೀದಿ ಮಾಡಿದ್ದಾರೆ. ಕಾರ್ಖಾನೆ ಸ್ಥಾಪನೆಗೆ ಪರವಾನಿಗೆಯನ್ನೂ ಪಡೆದಿದ್ದಾರೆ. ಕಾರ್ಖಾನೆ ಬೇಡವೆಂದು ಮುಖ್ಯಮಂತ್ರಿ ಹಾಗೂ ಕೈಗಾರಿಕಾ ಸಚಿವರಿಗೂ ಮವನಿ ಸಲ್ಲಿಸಿದ್ದೇನೆ. ನನ್ನ ಕ್ಷೇತ್ರದಲ್ಲಿಯೇ ಬೇರೆ ಸ್ಥಳದಲ್ಲಿ ಜಾಗ ಕೊಡಿಸುವೆ. ಆದರೆ ಮುದ್ದಾಬಳ್ಳಿ-ಗೊಂಡಬಾಳ ಭಾಗದಲ್ಲಿ ಬೇಡ ಎಂದು ತಿಳಿಸಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT