ಶುಕ್ರವಾರ, ಸೆಪ್ಟೆಂಬರ್ 24, 2021
23 °C

‘ಆಮ್ಲಜನಕ ಕೊರತೆ ನೀಗಿಸಲು ಸಿದ್ಧತೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ‘ಕೋವಿಡ್‌ ಕಾರಣ ಕೇಂದ್ರ ಸರ್ಕಾರ ಇಲ್ಲಿನ ಉಪವಿಭಾಗ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ ಮಂಜೂರು ಮಾಡಿದೆ’ ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.

ನಗರದ ಉಪವಿಭಾಗ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕಾಗಿ ಸರಬರಾಜು ಮಾಡಲಾದ ಸಾಮಗ್ರಿ ಪರಿಶೀಲಿಸಿ ಮಾತನಾಡಿದರು.

ಕೊರೊನಾ ಮೊದಲ ಮತ್ತು ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದ ಸಾಕಷ್ಟು ಜನ ಪ್ರಾಣ ಬಿಟ್ಟಿದ್ದಾರೆ. ತಾಲ್ಲೂಕಿನಲ್ಲಿ ಮುಂದೆ ಆಮ್ಲಜನಕದ ಕೊರತೆ ಆಗದಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ್ ಸವಡಿ ಮಾತನಾಡಿ,‘ಘಟಕ ಸ್ಥಾಪನೆಗೆ ಸಿದ್ದತೆ ನಡೆಸಿ, ಆರಂಭದಲ್ಲಿ ಪ್ರಾಯೋಗಿಕ ಪರೀಕ್ಷೆ ಮಾಡಲಾಗುತ್ತದೆ’ ಎಂದು ಹೇಳಿದರು.

ನಗರಸಭೆ ಮಾಜಿ ಅಧ್ಯಕ್ಷ ಹನಮಂತಪ್ಪ ನಾಯಕ, ಜೋಗದ ನಾರಾಯಣಪ್ಪ ಸೇರಿ ವೈದ್ಯಕೀಯ ಸಿಬ್ಬಂದಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.