ಸೋಮವಾರ, ಜೂನ್ 14, 2021
26 °C

ಪಲ್ಲಕ್ಕಿ ಉತ್ಸವಕ್ಕೆ ತಡೆ: ಕಲ್ಲು ತೂರಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಭಕ್ತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಷ್ಟಗಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ದೋಟಿಹಾಳದಲ್ಲಿ ಅಧಿಕಾರಿಗಳ ಸೂಚನೆ ಕಡೆಗಣಿಸಿ ಪಲ್ಲಕ್ಕಿ ಉತ್ಸವಕ್ಕೆ ಮುಂದಾದ ಭಕ್ತರನ್ನು ತಡೆಯಲು ಯತ್ನಿಸಿದ್ದಕ್ಕೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು ಅಲ್ಲದೇ ಜೀಪ್‌ ಜಖಂಗೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ 50 ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಅವಧೂತ ಶುಕಮುನಿ ಆರಾಧನೆ ಪ್ರಯುಕ್ತ ಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿತ್ತು. ಕರ್ತವ್ಯಕ್ಕೆ ಅಡ್ಡಿಪಡಿಸಿದ, ಅವಾಚ್ಯ ಪದಗಳಿಂದ ನಿಂದಿಸಿದ ಮತ್ತು ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಕಂದಾಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಗ್ರಾಮಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಜಿ.ಸಂಗೀತಾ, ಡಿವೈಎಸ್‌ಪಿ ಬಿ.ಪಿ.ಚಂದ್ರಶೇಖರ ಮತ್ತು ಅಧಿಕಾರಿಗಳು ಭೇಟಿ ನೀಡಿದರು.

‘ಕೋವಿಡ್‌ ಕಾರಣಕ್ಕೆ ಆರಾಧನಾ ಮಹೋತ್ಸವದ ಸಾರ್ವಜನಿಕ ಆಚರಣೆಗೆ ತಾಲ್ಲೂಕು ಆಡಳಿತ ಅನುಮತಿ ನೀಡಿರಲಿಲ್ಲ. ದೇವಸ್ಥಾನದ ಒಳಗೆ ಸರಳ ಆಚರಣೆಗೆ ತಿಳಿಸಲಾಗಿತ್ತು. ಪೂಜೆ ನಂತರ ನಿಷೇಧದ ನಡುವೆಯು ಭಕ್ತರು ದೇವಾಲಯದಿಂದ ಹೊರಬಂದು ದೋಟಿಹಾಳ-ಕೇಸೂರು ಗ್ರಾಮಗಳಲ್ಲಿ ಪಲ್ಲಕ್ಕಿ ಹೊತ್ತುಕೊಂಡು ಹೋಗಿದ್ದಾರೆ’ ಎಂದು ತಹಶೀಲ್ದಾರ್ ಎಂ.ಸಿದ್ದೇಶ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು