ಶುಕ್ರವಾರ, ಜುಲೈ 30, 2021
20 °C

ಶಾಸಕ ಪರಣ್ಣ ಮುನವಳ್ಳಿಗೆ ಕೋವಿಡ್‌ ದೃಢ; ಅಮರೇಗೌಡ ಬಯ್ಯಾಪುರ ಹೋಂ ಕ್ವಾರಂಟೈನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಷ್ಟಗಿ (ಕೊಪ್ಪಳ ಜಿಲ್ಲೆ): ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರಲ್ಲಿ ಕೋವಿಡ್‌ ದೃಢಪಟ್ಟಿದ್ದು, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಷ್ಟಗಿಯ ಶಾಸಕ ಅಮರೇಗೌಡ ಬಯ್ಯಾಪುರ ಅವರಿಗೆ ಮುಂದಿನ 14 ದಿನಗಳವರೆಗೆ ಹೋಂ ಕ್ವಾರಂಟೈನ್‌ನಲ್ಲಿಯೇ ಇರುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಭಾನುವಾರ ಸೂಚಿಸಿದ್ದಾರೆ.

ಈ ವಿಷಯವನ್ನು ಸ್ವತಃ ಶಾಸಕ ಬಯ್ಯಾಪುರ ಅವರು, 'ಪ್ರಜಾವಾಣಿ'ಗೆ ಮಾಹಿತಿ ನೀಡಿದ್ದು, ಜು.17 ರಂದು ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೋವಿಡ್‌ಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಿದ್ದಾಗ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಪರಣ್ಣ ಮುನವಳ್ಳಿ ಅವರ ಪಕ್ಕದಲ್ಲಿ ಕುಳಿತಿದ್ದೆ. ಮನೆಯಲ್ಲಿಯೇ ಇರುವಂತೆ ಡಿಎಚ್‌ಒ ಡಾ.ಲಿಂಗರಾಜು ತಿಳಿಸಿದ್ದಾರೆ ಎಂದು ಹೇಳಿದರು.

ಸಾರ್ವಜನಿಕರ ಸಂಪರ್ಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೇರವಾಗಿ ಯಾರನ್ನೂ ಭೇಟಿ ಮಾಡುವುದಿಲ್ಲ. ಸಾಧ್ಯವಾದಷ್ಟು ದೂರವಾಣಿ ಮೂಲಕ ಸಂಬಂಧಿಸಿದವರನ್ನು ಸಂಪರ್ಕಿಸಿ ತಾಲ್ಲೂಕಿನ ಜನರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಬಯ್ಯಾಪುರ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು