ಗುರುವಾರ , ಜನವರಿ 27, 2022
21 °C

ಮೇಣೇಧಾಳ: ಪ್ರೌಢಶಾಲೆಯಲ್ಲಿ ಪಾಲಕರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಾವರಗೇರಾ: ಸಮೀಪದ ಮೆಣೇಧಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಪಾಲಕರು ಮತ್ತು ಎಸ್‌ಡಿಎಂಸಿ ಸಭೆಯನ್ನು ಗಣ್ಯರು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.

ಸಭೆ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ನಿಂಬಮ್ಮ ತುಂಬದ ಮಾತನಾಡಿ, ಸಭೆಯ ಉದ್ದೇಶ ಮತ್ತು ಪಾಲಕರು, ವಿದ್ಯಾರ್ಥಿಗಳ ಕಾರ್ಯ, ವಿವಿಧ ವಿಷಯಗಳ ಕುರಿತು ವಿವರಿಸಿದರು.

ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಬಾಳಪ್ಪ, ಪದಾಧಿಕಾರಿಗಳಾದ ಖಾಸಿಂಬಿ ಬೇಗಂ, ದುರಗಪ್ಪ, ಹನಮಂತಪ್ಪ, ನಾಗಮ್ಮ ಮತ್ತು ಶಿಕ್ಷಕರು ಪಾಲಕರು ಇದ್ದರು. ಕುಮಾರಿ ಬಸಮ್ಮ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಕಾಂಬೈ ನಿರೂಪಿಸಿ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.