ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ವಯಂ ಪ್ರೇರಿತವಾಗಿ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿ’

Last Updated 18 ಸೆಪ್ಟೆಂಬರ್ 2022, 13:22 IST
ಅಕ್ಷರ ಗಾತ್ರ

ಕೊಪ್ಪಳ: ‘ನಗರದ ಎಲ್ಲಾ ಜನ ಸ್ವಯಂ ಪ್ರೇರಿತವಾಗಿ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ ಇಂಡಿಯನ್ ಸ್ವಚ್ಛತಾ ಲೀಗ್ ಮತ್ತು 75ನೇ ಕಲ್ಯಾಣ ಕರ್ನಾಟಕ ದಿನಾಚರಣೆ ಅಂಗವಾಗಿ ಭಾನುವಾರ ಕೊಪ್ಪಳ ಕೋಟೆ ಸ್ವಚ್ಛತಾ ಕಾರ್ಯಕ್ರಮ ಅಭಿಯಾನ ಉದ್ಘಾಟಿಸಿ ಮಾತನಾಡಿ ‘ಪೌರ ಕಾರ್ಮಿಕರಷ್ಟೇ ದಿನನಿತ್ಯದ ಸ್ವಚ್ಛತೆ ಕಾರ್ಯಕ್ರಮ ಮಾಡದೆ ಸ್ವಯಂಸೇವಕರು, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳು ನಗರವನ್ನು ತ್ಯಾಜ್ಯ ಮುಕ್ತ ಮಾಡಲು ಕೈ ಜೋಡಿಸಬೇಕು’ ಎಂದರು.

ನಗರಸಭೆ ಅಧ್ಯಕ್ಷೆ ಶಿವಗಂಗಾ ಎಸ್. ಭೂಮಕ್ಕನವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯರಾಣಿ ಕೆ. ವಿ., ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗುಲೆ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ನಾಗರಾಜ್, ನಗರಸಭೆ ಉಪಾಧ್ಯಕ್ಷೆ ಆಯಿಷಾ ರುಬೀನಾ,ಸದಸ್ಯರಾದ ಅಮ್ಜದ್ ಪಟೇಲ್, ಅಜಿಮುದ್ದೀನ್ ಅತ್ತಾರ, ಅಕ್ಬರ್ ಪಲ್ಟನ್, ಪೌರಾಯುಕ್ತ ಎಚ್.ಎನ್. ಭಜಕ್ಕನವರ, ವಿರೂಪಾಕ್ಷಿ ಮೂರ್ತಿ, ಮುಖ್ಯಾಧಿಕಾರಿಗಳಾದ ಚಂದ್ರಶೇಖರ್, ಲಕ್ಷ್ಮಣ ಕಟ್ಟಿಮನಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT