ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಬುರ್ಗಾ: ಮಾಸ್ಕ್ ಧರಿಸದಿದ್ದರೆ ದಂಡ!

Last Updated 22 ಸೆಪ್ಟೆಂಬರ್ 2020, 2:36 IST
ಅಕ್ಷರ ಗಾತ್ರ

ಯಲಬುರ್ಗಾ: ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಜನರಿಗೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸೋಮವಾರ ದಂಡ ವಿಧಿಸಿದರು.

ಕಡ್ಡಾಯವಾಗಿ ಮಾಸ್ಕ್ ಧರಿಸಿ ಹೊರಗಡೆ ತಿರುಗಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಜಯರಾಂ ಚವ್ಹಾಣ ಮಾತನಾಡಿ, ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರ ಜತೆಗೆ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಸಾರ್ವಜನಿಕರು ಜಾಗ್ರತೆ ವಹಿಸುತ್ತಿಲ್ಲ ಎಂದರು.

ಸೋಂಕು ಕಾಣಿಸಿಕೊಂಡರೂ ಚಿಕಿತ್ಸೆ ಪಡೆಯದೆ ಬೇಜವಾಬ್ದಾರಿತನ ತೋರುತ್ತಿರುವುದರಿಂದ ಕೋವಿಡ್ ಹರಡುವಿಕೆ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ದಂಡ ವಿಧಿಸಲಾಗುತ್ತಿದೆ ಎಂದು ಹೇಳಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಫಕೀರಪ್ಪ ಕಟ್ಟಿಮನಿ ಮಾತನಾಡಿ, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಸುವುದು ಹಾಗೂ ಮಾಸ್ಕ್ ಧರಿಸುವುದನ್ನು ಸಾರ್ವಜನಿಕರು ನಿರಂತರವಾಗಿ ರೂಢಿಸಿಕೊಳ್ಳುವುದು ಅಗತ್ಯವಿದೆ ಎಂದರು.

ಎಎಸ್‍ಐ ಗುಲಾಂಸಾಬ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT