ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್ ಕಡ್ಡಾಯ, ತಪ್ಪಿದರೆ ದಂಡ: ಕೊಪ್ಪಳ ಜಿಲ್ಲಾಧಿಕಾರಿ

ಮರಳು ಅಕ್ರಮ ಸಾಗಾಣಿಕೆ ತಡೆ, ಕೋವಿಡ್- ನಿಯಂತ್ರಣ ಕ್ರಮಗಳ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್ಚರಿಕೆ
Last Updated 8 ಸೆಪ್ಟೆಂಬರ್ 2020, 1:14 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯಲ್ಲಿ ನಾಳೆಯಿಂದ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಧರಿಸದವರಿಗೆ ದಂಡ ವಿಧಿಸಿ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಿ, ತಪ್ಪು ಪುನರಾವರ್ತನೆಯಾದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಸೋಮವಾರ ನಡೆದ ಮರಳು ಅಕ್ರಮ ಸಾಗಾಣಿಕೆ ತಡೆ ಮತ್ತು ಕೋವಿಡ್-19 ನಿಯಂತ್ರಣ ಕ್ರಮಗಳ ಕುರಿತುಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಮಾಸ್ಕ್ ಧರಿಸುವಿಕೆ, ಅಂತರ ಕಾಯ್ದುಕೊಳ್ಳುವಿಕೆ ಮತ್ತು ಸ್ವಚ್ಛತೆ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು. ಈ ಕುರಿತು ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ನಾಳೆಯಿಂದಲೇ ಜಿಲ್ಲೆಯಲ್ಲಿ ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯ ಮಾಡಿ. ಈ ಕುರಿತುಸೋಮವಾರ ಸಂಜೆಯಿಂದಲೇ ಮೈಕ್‌ಗಳ ಮೂಲಕ ಜಿಲ್ಲೆಯಾದ್ಯಂತ ಪ್ರಚಾರ ಮಾಡಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಿ ಎಂದರು.

ಸಾರ್ವಜನಿಕವಾಗಿ ಓಡಾಡುವವರು ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ‎₹‎ 200 ಗಳನ್ನು ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ‎₹‎ 100 ಗಳನ್ನು ದಂಡ ವಿಧಿಸಿ. ದಂಡ ಪಾವತಿಸದವರನ್ನು ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಿ. ತಪ್ಪಿದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ. ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಇಂತಹ ಕ್ರಮಗಳು ಕಡ್ಡಾಯವಾಗಿ ಜಾರಿಯಾಗಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನ್ ಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಗಂಗಾವತಿ ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ, ಸಿಪಿಐ ರವಿ ಉಕ್ಕುಂದ, ಯುನಿಸೆಫ್‌ನ ಜಿಲ್ಲಾ ಸಂಯೋಜಕ ಹರೀಶ್ ಜೋಗಿ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT