ಶನಿವಾರ, ಜುಲೈ 24, 2021
20 °C
ಜೆಡಿಎಸ್‌ ತಾಲ್ಲೂಕು ಘಟಕದ ಪದಾಧಿಕಾರಿಗಳಿಂದ ಮನವಿ

ಬೆಲೆ ಏರಿಕೆಯಿಂದ ಜನರಿಗೆ ಸಂಕಷ್ಟ: ಬಸವರಾಜ ನಾಯಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಷ್ಟಗಿ: ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೆಡಿಎಸ್‌ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಎಂ.ಸಿದ್ದೇಶ್‌ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ತಾಲ್ಲೂಕು ಘಕಟದ ಅಧ್ಯಕ್ಷ ಬಸವರಾಜ ನಾಯಕ,‘ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳದಿಂದ ಅಗತ್ಯವಸ್ತುಗಳ ಬೆಲೆಯಲ್ಲಿಯೂ ಬಹಳಷ್ಟು ಹೆಚ್ಚಳವಾಗಿ ಬಡವರು, ಜನಸಾಮಾನ್ಯರು, ರೈತರು ತತ್ತರಿಸಿದ್ದಾರೆ. ಕೋವಿಡ್‌ ಲಾಕ್‌ಡೌನ್‌ ಜಾರಿಯಿಂದಾಗಿ ಮೊದಲೇ ತೊಂದರೆಯಲ್ಲಿರುವ ಜನರಿಗೆ ಈಗ ಬೆಲೆ ಏರಿಕೆಯ ಬಿಸಿ ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ವಿದ್ಯುತ್‌ ದರ ಏರಿಕೆ ಬಡವರ ಹೊಟ್ಟೆಯ ಮೇಲೆ ಬರೆ ಎಳೆದಿದೆ’ ಎಂದು ಅವರು ದೂರಿದರು.

ಕೋವಿಡ್‌ ಕಾರಣದಿಂದ ಮೃತಪಟ್ಟಿರುವ ವ್ಯಕ್ತಿಗಳ ಕುಟುಂಬಗಳಿಗೆ ಹೆಚ್ಚಿನ ಪರಿಹಾರಧನ ವಿತರಿಸಬೇಕು. ರಸಗೊಬ್ಬರದ ಮೇಲಿನ ಸಹಾಯಧನ ಹೆಚ್ಚಿಸುವ ಮೂಲಕ ರೈತರ ಮೇಲಿನ ಆರ್ಥಿಕ ಹೊರೆ ಇಳಿಸಬೇಕು. ವಿದ್ಯುತ್‌, ಪೆಟ್ರೋಲ್‌ ದರಗಳನ್ನು ಕೂಡಲೇ ಇಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಪಕ್ಷದ ಅನೇಕ ಪ್ರಮುಖರು, ಕಾರ್ಯಕರ್ತರು, ರೈತರು ಈ ಸಂದರ್ಭದಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು