ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಲಬುರ್ಗಾ: ಸಿಸಿ ಕ್ಯಾಮೆರಾ ದುರಸ್ತಿಗೆ ಮನವಿ

Published 30 ಜೂನ್ 2024, 14:09 IST
Last Updated 30 ಜೂನ್ 2024, 14:09 IST
ಅಕ್ಷರ ಗಾತ್ರ

ಯಲಬುರ್ಗಾ: ‘ಪಟ್ಟಣದ ವಿವಿಧ ವೃತ್ತ ಹಾಗೂ ಪ್ರಮುಖ ರಸ್ತೆ ಬದಿಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ಬಂದ್ ಆಗಿದ್ದು ಇವುಗಳನ್ನು ದುರಸ್ತಿಗೊಳಿಸಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಕ್ರಮಕೈಗೊಳ್ಳಬೇಕು’ ಎಂದು ಸ್ವಾಬಿಮಾನಿ ಸಂಘಟನೆಯ ಮುಖಂಡ ಮಹೇಶ ಛಲವಾದಿ ಮತ್ತು ಪ್ರಶಾಂತ ಬಳಗೇರಿ ಒತ್ತಾಯಿಸಿದ್ದಾರೆ.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿ ಅವರು, ‘ಸಿಸಿ ಕ್ಯಾಮೆರಾಗಳು ಕೆಟ್ಟು ಸುಮಾರು ವರ್ಷಗಳೆ ಕಳೆದರೂ ಅವುಗಳ ದುರಸ್ತಿಗೆ ಮುಂದಾಗದೇ ಇರುವುದು ಬೇಸರದ ಸಂಗತಿ. ಕೂಡಲೇ ಅವುಗಳನ್ನು ದುರಸ್ಥಿಗೊಳಿಸಿ ಉಪಯೋಗಕ್ಕೆ ಬರುವಂತೆ ಮಾಡಬೇಕು. ವಿವಿಧ ವೃತ್ತದ ಬಳಿ ನಡೆಯುವ ಅಕ್ರಮಗಳು ಮತ್ತು ಅಹಿಕತರ ಘಟನೆಗಳ ನಿಯಂತ್ರಣಕ್ಕೆ ಮುಂದಾಗಬೇಕು’ ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಈ ವೇಳೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT