ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾವರಗೇರಾ: ಬಿರುಸಿನ ಮತದಾನ

Last Updated 27 ಡಿಸೆಂಬರ್ 2020, 11:59 IST
ಅಕ್ಷರ ಗಾತ್ರ

ತಾವರಗೇರಾ: ಹೋಬಳಿ ವ್ಯಾಪ್ತಿಯಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಶಾಂತಿಯುತವಾಗಿ ನಡೆಯಿತು.

ಕಿಲ್ಲಾರಹಟ್ಟಿ, ಸಂಗನಾಳ, ಜುಮಲಾಪುರ, ಮೆಣೇದಾಳ ಹಾಗೂ ಲಿಂಗದಹಳ್ಳಿ ಗ್ರಾಮಗಳಲ್ಲಿ ಬಿರುಸಿನ ಮತದಾನ ನಡೆಯಿತು.

ಹಕ್ಕು ಚಲಾಯಿಸಲು ಮತದಾರರು ಮತಗಟ್ಟೆಗಳ ಎದುರು ಸಾಲಾಗಿ ನಿಂತಿರುವುದು ಕಂಡುಬಂತು.

ಆಶಾ ಕಾರ್ಯಕರ್ತೆಯರು ಮತದಾರರ ದೇಹದ ಉಷ್ಣಾಂಶ ಪರೀಕ್ಷಿಸಿದರು. ಅಂತರ ಕಾಯ್ದುಕೊಂಡು ನಿಲ್ಲುವಂತೆ ಸೂಚಿಸಿದರು.

ನವಲಹಳ್ಳಿ ಗ್ರಾಮದಲ್ಲಿ ಮತದಾನ ಕೇಂದ್ರದ ಹೊರಗೆ ಪೆಂಡಾಲ್‌ ಹಾಕಿ ನೆರಳಿನ ವ್ಯವಸ್ಥೆ ಮಾಡಲಾಗಿತ್ತು. ಮತದಾರರು ಪೆಂಡಾಲ್‌ ಕೆಳಗೆ ಸಾಲಾಗಿ ನಿಂತಿದ್ದರು.

ಪಿಎಸ್‌ಐ ಗೀತಾಂಜಲಿ ಶಿಂಧೆ ನೇತೃತ್ವದಲ್ಲಿ ಸೂಕ್ತ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT