ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷಯ: ಪತ್ತೆ, ಚಿಕಿತ್ಸೆಯಲ್ಲಿ ಸಾಧನೆ

ಜಿಲ್ಲೆಯಲ್ಲಿ ಡಿ.1ರಿಂದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ
Last Updated 1 ಡಿಸೆಂಬರ್ 2020, 3:53 IST
ಅಕ್ಷರ ಗಾತ್ರ

ಕೊಪ್ಪಳ:ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ವತಿಯಿಂದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನವನ್ನು ಡಿ.1 ರಿಂದ 31 ರವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ದುರ್ಬಲ ಮತ್ತು ಖಂಡಾಂತರ ಪ್ರದೇಶಗಳಲ್ಲಿ ಕ್ಷಯರೋಗಿಗಳನ್ನು ಪತ್ತೆ ಮಾಡುವುದು ಈ ಅಭಿಯಾನದ ಉದ್ದೇಶವಾಗಿದೆ. ಕ್ಷಯರೋಗದ ಸಹವ್ಯಾಧಿಗಳಾದ ಮಧುಮೇಹ, ಹೆಚ್.ಐ.ವಿ. ತಂಬಾಕು ಸೇವಿಸುವವರು, ಮದ್ಯಪಾನ ಮಾಡುವವರು, ಕ್ಯಾನ್ಸರ್, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವವರು, ಸಿ.ಓ.ಪಿ.ಡಿ. ರೋಗ ಹಾಗೂ ಇತರೆ ಇಂತಹ ರೋಗಿಗಳಿಗೆ ಸಾಮಾನ್ಯ ಜನರಿಗಿಂತ 3 ರಿಂದ 4ರಷ್ಟು ಅತೀ ವೇಗವಾಗಿ ಹರಡುವ ರೋಗವಾಗಿದೆ.

ಕ್ಷಯರೋಗದಲಕ್ಷಣ:ಎರಡು ವಾರಕ್ಕಿಂತ ಕೆಮ್ಮು, ಸಂಜೆ ವೇಳೆ ಜ್ವರ, ತೂಕ ಕಡಿಮೆಯಾಗುವುದು ಮತ್ತು ರಾತ್ರಿ ವೇಳೆ ಬೆವರುವುದು, ಕಫದಲ್ಲಿ ರಕ್ತ ಬೀಳುವುದು, ಕಂಕುಳು ಮತ್ತು ಕತ್ತುಗಳಲ್ಲಿ ಗಡ್ಡೆಗಳು ಇಂತಹ ಯಾವುದಾದರೂ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಕ್ಷಯರೋಗದ ಪರೀಕ್ಷೆ ಮಾಡಿಸಬೇಕು.

ಗುರಿ:ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಒಟ್ಟು 3,11,850 ಜನಸಂಖ್ಯೆಯಲ್ಲಿ 2,80,665 ಜನರ ತಪಾಸಣೆ ಮಾಡಿ, 14,033 ಜನರನ್ನು ತೀವ್ರ ತಪಾಸಣೆಗೆ ಒಳಪಡಿಸುವ ಮೂಲಕ ಸುಮಾರು 281 ಕ್ಷಯರೋಗಿಗಳನ್ನು ಪತ್ತೆ ಮಾಡಲು ಉದ್ದೇಶಿಸಲಾಗಿದೆ. ಸದರಿ ಆಂದೋಲನದಲ್ಲಿ 1,559 ತಂಡ ಹಾಗೂ 3,119 ತಂಡದ ಸದಸ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟು 77,963 ಮನೆಗಳಿಗೆ ಭೇಟಿ ನೀಡುವ ಗುರಿ ಹಮ್ಮಿಕೊಳ್ಳಲಾಗಿದೆ.

ಸಾಧನೆ:ಪ್ರಸಕ್ತ ಸಾಲಿನಲ್ಲಿ ಸುಮಾರು 8520 ರೋಗಿಗಳಿಗೆ ಸಿ.ಬಿ.ಎನ್.ಎ.ಎ.ಟಿ ಟೆಸ್ಟ್ ಮಾಡಿಸಲಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ ಬಹಳಷ್ಟು ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.2017 ರಿಂದ 2020ರವರೆಗೆ ಜಿಲ್ಲೆಯಲ್ಲಿ ಒಟ್ಟು 2709 ಕ್ಷಯರೋಗಿಗಳ ಪತ್ತೆಯಾಗಿದೆ. ಕ್ಷಯರೋಗದಿಂದ 246 ರೋಗಿಗಳು ಮರಣ ಹೊಂದಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 137 ರೋಗಿಗಳು ಮರಣ ಹೊಂದಿದ್ದಾರೆ.

ಜಿಲ್ಲೆಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳು ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ ಅತೀ ಕಡಿಮೆ ಪ್ರಗತಿ ಸಾಧಿಸಲಾಗಿದೆ. ಕೊಪ್ಪಳ ತಾಲ್ಲೂಕಿನ ಇಂದರಗಿ, ಹಿರೇಬೊಮ್ಮನಾಳ, ಬೂದಗುಂಪಾ, ಹಾಸಗಲ್ಸೇರಿದಂತೆ 50ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳು ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನದಲ್ಲಿ ಅತ್ಯುತ್ತಮ ಸಾಧನೆ ಮಾಡಿವೆ.

ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಕೇಂದ್ರಗಳಿಗೆ ಮತ್ತು ಸಿಬ್ಬಂದಿಗೆ ಎ.ಸಿ.ಎಫ್ ಟ್ರೋಫಿ ಕೂಡಾ ದೊರೆತಿದೆ. ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಕಾರ್ಯಕ್ರಮ ಯಶಸ್ವಿಯಾಗಿ ಸಾಗಿದ್ದು, ಕೇಂದ್ರ ಸರ್ಕಾರ ಮೆಚ್ಚುಗೆ ಸೂಚಿಸಿ ಪ್ರಮಾಣ ಪತ್ರ ನೀಡಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಮಹೇಶ.ಎಂ.ಜಿ.ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT