ಭಾನುವಾರ, ಜುಲೈ 25, 2021
25 °C

ನಿಡಶೇಸಿ ಕೆರೆ ನಡುಗಡ್ಡೆಯಲ್ಲಿ ಸಸಿಗಳ ನಾಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಷ್ಟಗಿ: ಪರಿಸರ ಸಮತೋಲನ ತಪ್ಪಿದರೆ ಅನೇಕ ರೀತಿಯ ರೋಗಗಳು ಬಾಧಿಸುತ್ತವೆ. ಹೀಗಾಗಿ ಅರಣ್ಯ ಸಂಪತ್ತನ್ನು ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು.

ತಾಲ್ಲೂಕಿನ ನಿಡಶೇಸಿ ಕೆರೆ ಪ್ರದೇಶದ ನಡುಗಡ್ಡೆಯಲ್ಲಿ ಅರಣ್ಯ ಇಲಾಖೆ, ಕೆರೆ ಅಭಿವೃದ್ಧಿ ಸಮಿತಿ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಸಿಗಳನ್ನು ನಾಟಿ ಮಾಡಿ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಗಿಡ–ಮರಗಳನ್ನು ಸಂರಕ್ಷಿಸುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯ ಅಲ್ಲ. ಎಲ್ಲರ ಜವಾಬ್ದಾರಿಯೂ ಆಗಿದೆ ಎಂದರು.

ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರಪ್ಪ ಬಳೂಟಗಿ, ಕೆರೆ ಅಭಿವೃದ್ಧಿಗೆ ಸಾರ್ವಜನಿಕರು ಸಹಕರಿಸಿದರೆ ಸಾವಿರಾರು ಸಸಿಗಳನ್ನು ನಾಟಿ ಮಾಡಿ ಅವುಗಳನ್ನು ಬೆಳೆಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಶ್ರಮವನ್ನು ಮರೆಯುವಂತಿಲ್ಲ ಎಂದು ಹೇಳಿದರು.

ಮಾಜಿ ಶಾಸಕ ಹಸನಸಾಬ್‌ ದೋಟಿಹಾಳ, ಪ್ರಾಚಾರ್ಯ ಟಿ.ಬಸವರಾಜ್, ಪುರಸಭೆ ಸದಸ್ಯ ಕಲ್ಲೇಶ ತಾಳದ ಇತರರು ಮಾತನಾಡಿದರು.

ಸರ್ಕಲ್‌ ಇನ್‌ಸ್ಪೆಕ್ಟರ್ ಜಿ.ಚಂದ್ರಶೇಖರ, ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಅನ್ವರ್, ಕೆರೆ ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಪರಸಪ್ಪ ಕತ್ತಿ, ಮಲ್ಲಿಕಾರ್ಜುನ ಬಳಿಗಾರ, ಆರ್‌.ಟಿ.ಸುಬಾನಿ, ಮಲ್ಲಿಕಾರ್ಜುನ ಮೇಟಿ ಸೇರಿದಂತೆ ಕೆರೆ ಅಭಿವೃದ್ಧಿ ಸಮಿತಿ ಪ್ರಮುಖರು, ಸದಸ್ಯರು, ಸಾರ್ವಜನಿಕರು. ಮಲಗಟ್ಟಿ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಅರಣ್ಯ ಜಾತಿಯ ನೂರಾರು ಸಸಿಗಳನ್ನು ಈ ಸಂದರ್ಭದಲ್ಲಿ ನಾಟಿ ಮಾಡಲಾಯಿತು. ಪುರಸಭೆ ವತಿಯಿಂದ ಪಟ್ಟಣದ 7ನೇ ವಾರ್ಡಿನಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಶಾಸಕರು ಭಾಗವಹಿಸಿದ್ದರು. ಮುಖ್ಯಾಧಿಕಾರಿ ಅಶೋಕ ಪಾಟೀಲ ಇತರರು ಇದ್ದರು.

ಹಿರೇಮನ್ನಾಪುರ ಗ್ರಾಮ ಪಂಚಾಯಿತಿ ಬಳಿ ಪರಿಸರ ದಿನಾಚರಣೆಗೆ ಶಾಸಕ ಚಾಲನೆ ನೀಡಿದರು. ಕಾರ್ಯನಿರ್ವಹಣಾಧಿಕಾರಿ ಕೆ.ತಿಮ್ಮಪ್ಪ, ಅರುಣಕುಮಾರ ದಳವಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರಪ್ಪ ಕನ್ನಾಳ ಇತರರು ಇದ್ದರು.

ಪಟ್ಟಣದ ಗ್ರಾಮೀಣ ನೀರು ನೈರ್ಮಲ್ಯ ಉಪ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಭರತಕುಮಾರ, ಮಂಜುನಾಥ್, ಬಸವರಾಜ ಪಾಟೀಲ ಸಿಬ್ಬಂದಿ ಇದ್ದರು.

ವೆಲ್ಫೇರ್‌ ಪಾರ್ಟಿ ವತಿಯಿಂದ ರೇಡಿಯನ್ಸ್ ಶಾಲೆ ಆವರಣದಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಹಸನುದ್ದೀನ್ ಆಲಂಬರ್ದಾರ್, ರಾಜಾನಾಯಕ, ಮುಹಮ್ಮದ್ ಆಫ್ತಾಬ್ ಇತರರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.