ಕೊಪ್ಪಳ: ಸ್ವಾತಂತ್ರ್ಯ ದಿನದ ಅಂಗವಾಗಿ ತೋಟಗಾರಿಕಾ ಇಲಾಖೆ ವತಿಯಿಂದ ಇಲಾಖೆಯ ಆವರಣದಲ್ಲಿ ಶುಕ್ರವಾರ ಆರಂಭವಾದ ಸಸ್ಯ ಸಂತೆ ಮತ್ತು ತೋಟಗಾರಿಕಾ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಶುಕ್ರವಾರ ಚಾಲನೆ ನೀಡಿದರು. ಆ. 20ರ ತನಕ ಮೇಳ ಜರುಗಲಿದೆ.

ಮಾವು, ಲಿಂಬೆ, ಮೊಸಂಬೆ, ಹಲಸು, ಕಿತ್ತಳೆ, ಚೈನಿಸ್ ಕಿತ್ತಳೆ, ಪೇರಲ, ತೆಂಗು, ದಾಳಿಂಬೆ, ಅಂಜೂರ, ವಾಟರ್ ಆಪಲ್, ಲಿಚ್ಚಿ, ಬೀಜರಹಿತ ಲಿಂಬೆ, ರಾಮ್ಫಲ, ಲಕ್ಷ್ಮಣ್ ಫಲ, ಸೇರಿದಂತೆ ವಿವಿಧ ಹಣ್ಣುಗಳ ಮತ್ತು ಕರಿಬೇವು, ವಿಳ್ಯೆದೆಲೆ ಸಸಿಗಳು, ಸಾಂಬಾರು ಪದಾರ್ಥ ಬೆಳೆಗಳಾದ ದಾಲ್ಚಿನ್ನಿ, ಲವಂಗ, ಏಲಕ್ಕಿ, ಕಾಳು ಮೆಣಸು ಸಸಿಗಳು ಹಾಗೂ ಅಲಂಕಾರಿಕ ಸಸಿಗಳು ಸೇರಿದಂತೆ ಇತರೆ ತಳಿಯ ಸಸಿಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇರಿಸಲಾಗಿದೆ.

ತೋಟಗಾರಿಕಾ ಇಲಾಖೆಯ ಸಸ್ಯಾಗಾರದಲ್ಲಿ ಉತ್ಪಾದಿಸಿದ ಹಣ್ಣು, ತರಕಾರಿ, ಪುಷ್ಪ ಅಲ್ಲದೇ ಆಲಂಕಾರಿಕ ಗಿಡಗಳು ಮತ್ತು ಪುಷ್ಪ ಸಸ್ಯಗಳು ಪ್ರದರ್ಶನವಿದೆ. ಕಡಿಮೆ ಖರ್ಚು, ಕಡಿಮೆ ನಿರ್ವಹಣೆ, ನಿರಂತರ ಆದಾಯ ಬರುವಂತಹ ತೋಟಗಾರಿಕೆ ಬೆಳೆಗಳನ್ನು ರೈತರಿಗೆ ಪರಿಚಯಿಸಲಾಗುತ್ತಿದೆ ಎಂದು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಕೃಷ್ಣ ಸಿ. ಉಕ್ಕುಂದ ತಿಳಿಸಿದರು.

ಸಾವಯವದತ್ತ ಹೆಜ್ಜೆ: ಜಿಲ್ಲೆಯಲ್ಲಿರುವ ಒಂಬತ್ತು ತೋಟಗಾರಿಕೆ ಕ್ಷೇತ್ರಗಳನ್ನು ಸಾವಯವ ಪರಿವರ್ತನೆ ಮಾಡುವ ಉದ್ದೇಶದೊಂದಿಗೆ ಪಂಚಗವ್ಯ, ಗೋ ಕೃಪಾಮೃತ, ಜೀವಾಮೃತ, ಬೀಜಾಮೃತ, ನಿಮಾಸ್ತ್ರ, ಘನ ಜೀವಾಮೃತ, ಅಗ್ನಿಅಸ್ತ್ರ, ಬ್ರಹ್ಮಾಸ್ತ್ರ, ದಶಪರ್ಣಿ ಕಷಾಯ, ದಶಗವ್ಯ, ಹ್ಯುಮಿಕ್ ಆಸಿಡ್, ಬಿಲ್ವ ಪತ್ರರಸಾಯನ, ಬೇವಿನ ಬೀಜದ ಸಾರ, ಸಂಜೀವಕ, ಅಮೃತಪಾನಿ, ಎರೆಹುಳ ಗೊಬ್ಬರ, ಎರೆಜಲ, ಬೇವಿನ ಹಿಂಡಿ ಹಾಗೂ ಮೀನಿನಿಂದ ತಯಾರಿಸಿದ ಔಷಧಿಗಳನ್ನು ಪ್ರಾತ್ಯಾಕ್ಷಿಕೆ ರೂಪದಲ್ಲಿ ರೈತರಿಗೆ ಪರಿಚಯಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.