ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ: 10 ವರ್ಷ ಜೈಲು

Published 29 ಮಾರ್ಚ್ 2024, 6:42 IST
Last Updated 29 ಮಾರ್ಚ್ 2024, 6:42 IST
ಅಕ್ಷರ ಗಾತ್ರ

ಕೊಪ್ಪಳ: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಸ್ಪಾಕ್‌ ಸುತಾರ ಎಂಬ ಅಪರಾಧಿಗೆ ಫೋಕ್ಸೊ ನ್ಯಾಯಾಲಯವು ಹತ್ತು ವರ್ಷಗಳ ಕಾಲ ಜೈಲು ಮತ್ತು ₹35 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಜಿಲ್ಲೆಯ ತಾವರಗೇರಾ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯನ್ನು ಅಸ್ಫಾಕ್‌ ಮೇಲಿಂದ ಮೇಲೆ ಚುಡಾಯಿಸುತ್ತಿದ್ದ. ಈ ವಿಷಯ ಎಲ್ಲರಿಗೂ ತಿಳಿದು ಬಾಲಕಿಯ ತಂದೆ ಯುವಕನಿಗೆ ಬುದ್ಧಿವಾದ ಹೇಳಿದರೂ ಕೇಳಿರಲಲ್ಲ. 2017ರ ಅಕ್ಟೋಬರ್‌ನಲ್ಲಿ ಬಾಲಕಿ ಶಾಲೆಗೆ ಹೋಗುವಾಗ ಮದುವೆಯಾಗೋಣ ಎಂದು ಪುಸಲಾಯಿಸಿ ಯುವಕ ವಿಜಯಪುರಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲಿ ಕೊಠಡಿ ಬಾಡಿಗೆ ಪಡೆದು ಸಂಭೋಗ ಮಾಡಿದ್ದ.

ಈ ಹಿನ್ನೆಲೆಯಲ್ಲಿ 2018ರಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಕುಷ್ಟಗಿ ವೃತ್ತದ ಸಿಪಿಐ ಸುರೇಶ ಎಚ್‌. ತಳವಾರ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ಫೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕಿ ಗೌರವ ದೇಸಾಯಿ ಅವರು ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT