ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಭ್ಯ ವರ್ತನೆ; ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Last Updated 16 ಜುಲೈ 2022, 4:32 IST
ಅಕ್ಷರ ಗಾತ್ರ

ಕಾರಟಗಿ: ಮಹಿಳೆ ಮತ್ತು ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿದ್ದು ಅಲ್ಲದೇ ವಿಡಿಯೊ ಮಾಡಿದ ಆರೋಪದ ಮೇಲೆ ಶಿಕ್ಷಕ ಮಹಮ್ಮದ್ ಅಜರುದ್ದೀನ್ ವಿರುದ್ಧ ‍ಪೋಕ್ಸೊ ಕಾಯ್ದೆಯಡಿ ಶುಕ್ರವಾರ ಪ್ರಕರಣ ದಾಖಲಾಗಿದೆ.‌‌

‘ಆರೋಪಿ ಅಜರುದ್ದೀನ್‌ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು, ಗಂಗಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶಗೌಡ ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿವಿಧ ಹಂತಗಳಲ್ಲಿ ತನಿಖೆ ನಡೆಸಿ, ಹಲವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಕಾರಟಗಿ ಠಾಣೆ ಪೊಲೀಸರು ತಿಳಿಸಿದ್ದಾರೆ.

‘ಮನೆ ಪಾಠ ಹೇಳಿಕೊಡುವ ನೆಪದಲ್ಲಿ ಆರೋಪಿಯು ಮಕ್ಕಳನ್ನು ಮನಸೋಇಚ್ಛೆ ಬಳಸಿಕೊಳ್ಳುತ್ತಿದ್ದ. ಯಾರೆಲ್ಲ ಮಕ್ಕಳು ತೊಂದರೆ ಅನುಭವಿಸಿದ್ದಾರೆ ಎಂಬುದನ್ನು ಪತ್ತೆ ಮಾಡಲಾಯಿತು. ಅವರಿಂದ ಸಿಕ್ಕ ಮಾಹಿತಿ ಆಧರಿಸಿ ಕ್ರಮ ತೆಗೆದು ಕೊಳ್ಳಲಾಯಿತು’ ಎಂದಿದ್ದಾರೆ.

ಗಂಗಾವತಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶಗೌಡ, ಜಿಲ್ಲಾ ಮಕ್ಕಳ ಹಕ್ಕುಗಳ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಶಿವಲೀಲಾ ಹೊನ್ನೂರು ನೇತೃತ್ವದ ಅಧಿಕಾರಿಗಳ ತಂಡ ಮಕ್ಕಳನ್ನು ಪತ್ತೆ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT