ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ಜಲಾಶಯಕ್ಕೆ ಬಾಗಿನ

Last Updated 18 ಆಗಸ್ಟ್ 2021, 5:16 IST
ಅಕ್ಷರ ಗಾತ್ರ

ಕೊಪ್ಪಳ: ತುಂಗಭದ್ರಾ ಜಲಾಶಯ ಭರ್ತಿಯಾದ ಕಾರಣ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ನಂತರ ಮಾತನಾಡಿದ ಸಚಿವರು,‘ಅವಧಿಗೆ ಮುಂಚೆಯೇ ಜಲಾಶಯ ತುಂಬಿರುವುದು ಸಂತಸ ತಂದಿದೆ. ಎಲ್ಲ ಕಾಲುವೆಗಳಿಗೆ ನೀರು ಬಿಡಲಾಗಿದೆ. ತುಂಗಭದ್ರಾ ನದಿ ಪಾತ್ರದ ಎಲ್ಲ ಕೊನೆಯ ಭಾಗದ ಕಾಲುವೆಗಳಿಗೆ ನೀರು ಹರಿಸಲಾಗುವುದು. ದೇವರು ದಯೆಯಿಂದ ಮಳೆ, ಬೆಳೆ ಚೆನ್ನಾಗಿದೆ’ ಎಂದರು.

ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ, ಸಂಸದ ವೈ.ದೇವೇಂದ್ರಪ್ಪ, ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ದಢೇಸೂಗೂರು, ಪರಣ್ಣ ಮುನವಳ್ಳಿ, ವೆಂಕಟರಾವ್ ನಾಡಗೌಡ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಎಚ್‌.ಎಂ., ಕೃಷಿ ಬೆಳೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಬಳ್ಳಾರಿ/ವಿಜಯನಗರಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಬಿ.ಗುಂಗೆ, ಮುಖ್ಯಎಂಜಿನಿಯರ್‌ ಕೃಷ್ಣಾಜಿ ಚೌವ್ಹಾಣ್, ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕಎಂಜಿನಿಯರ್ ಎಲ್.ಬಸವರಾಜ್, ತುಂಗಭದ್ರಾ ನಾಲಾ ನಿರ್ಮಾಣ ವೃತ್ತದ ಅಧೀಕ್ಷಕಎಂಜಿನಿಯರ್ ಪಿ.ಬಿ.ಪ್ರಕಾಶ್, ಕಾರ್ಯಪಾಲಕಎಂಜಿನಿಯರ್ ಕೆ.ಬಿ.ಎಚ್. ಶಿವಶಂಕರ್, ಹೊಸಪೇಟೆ ಉಪ ವಿಭಾಗಾಧಿಕಾರಿ ಸಿದ್ಧರಾಮೇಶ್ವರ, ಕೊಪ್ಪಳ ‌ಉಪ ವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಅವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT