ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೀದಿ ಬಾಗಿಲಿಗೆ ಮಂಗಳಾರತಿ: ಐವರ ವಿರುದ್ದ ಪ್ರಕರಣ

Published 2 ಅಕ್ಟೋಬರ್ 2023, 14:33 IST
Last Updated 2 ಅಕ್ಟೋಬರ್ 2023, 14:33 IST
ಅಕ್ಷರ ಗಾತ್ರ

ಗಂಗಾವತಿ (ಕೊಪ್ಪಳ ಜಿಲ್ಲೆ): ಹಿಂದೂ ಮಹಾಮಂಡಳಿಯ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಇಲ್ಲಿನ ಜಾಮೀಯ ಮಸೀದಿ ಬಾಗಿಲಿಗೆ ಆರತಿ ಬೆಳಗಿ, ಹಿಂದೂ ದೇವರ ಹೆಸರಲ್ಲಿ ಘೋಷಣೆ ಕೂಗಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಗಂಗಾವತಿ ನಗರ ಪೊಲೀಸ್‌ ಠಾಣೆಯಲ್ಲಿ ಐದು ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಯಮನೂರ ರಾಠೋಡ, ರೌಡಿಶೀಟರ್‌ಗಳಾದ ಶ್ರೀಕಾಂತ ಹೊಸಕೇರಿ, ಕುಮಾರ ಹೂಗಾರ, ಚೆನ್ನಬಸವ ಹೂಗಾರ ಹಾಗೂ ಸಂಗಮೇಶ ಅಯೋಧ್ಯ ವಿರುದ್ಧ ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದಾರೆ.

‘ಸೆ. 28ರಂದು ಗಣಪತಿ ವಿಸರ್ಜನೆ ಮೆರವಣಿಗೆ ಜಾಮೀಯ ಮಸೀದಿ ಬಳಿ ಬರುತ್ತಿದ್ದಂತೆಯೇ ಮಸೀದಿ ಬಾಗಿಲಿಗೆ ಆರತಿ ಬೆಳಗಿದ್ದಾರೆ. ಗಲಭೆ ಮಾಡುವ ಉದ್ದೇಶದಿಂದ ಜೈಶ್ರೀರಾಮ್, ಭಾರತ ಮಾತಾಕೀ ಜೈ, ಗವಿ ಗಂಗಾಧರೇಶ್ವರ ಮಹಾರಾಜ ಕೀ ಜೈ ಎನ್ನುವ ಘೋಷಣೆಗಳನ್ನು ಕೂಗಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಂಗಳಾರತಿ ಮಾಡುವ ವಿಡಿಯೊವನ್ನು ಯಮನೂರ ರಾಠೋಡ ಎಂಬುವವರು ತಮ್ಮ ಫೇಸ್‌ಬುಕ್‌ ರೀಲ್ಸ್‌ನಲ್ಲಿ ಹಂಚಿಕೊಂಡು ‘ಧರ್ಮೋ ರಕ್ಷತಿ ರಕ್ಷತಃ, ಮೂಲ ಗಂಗಾಧರೇಶ್ವರ ಪುರಾತನ ದೇವಾಲಯಕ್ಕೆ ಮಂಗಳಾರತಿ ಎಂದು ಬರೆದುಕೊಂಡಿದ್ದಾರೆ. ಇದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.

‘ಮಸೀದಿ ಬಾಗಿಲಿಗೆ ಆರತಿ ಬೆಳಗುವ ವಿಡಿಯೊವನ್ನು ಅನೇಕರು ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದು ಬೇರೆ ಬೇರೆ ಅರ್ಥಗಳನ್ನು ಮೂಡಿಸಿ ಮುಸ್ಲಿಂ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ರೀತಿಯ ಘಟನೆಯಾಗಿದ್ದು, ಎಫ್‌ಐಆರ್‌ ದಾಖಲಿಸಲಾಗಿದೆ‘ ಎಂದು ಗಂಗಾವತಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT