ಕೊಪ್ಪಳದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆದ ಅನಾಹುತವನ್ನು ಎಲ್ಲರೂ ನೋಡಿದ್ದಾರೆ. ಆದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ರಸ್ತೆಯ ಗುಂಡಿಗಳನ್ನಾದರೂ ಮುಚ್ಚುವ ಕೆಲಸ ತುರ್ತಾಗಿ ಆಗಬೇಕುರಮೇಶ ಒಂಕಲಕುಂಟಿ ಸ್ಥಳೀಯರು
ರಸ್ತೆ ದುರಸ್ತಿ ಮಾಡುವಂತೆ ಮತ್ತು ಕೊಪ್ಪಳ ನಗರದ ಗುಂಡಿಗಳಿಗೆ ತೇಪೆ ಹಾಕಿ ರಸ್ತೆಗಳನ್ನು ಸರಿಪಡಿಸುವಂತೆ ಅನೇಕ ಬಾರಿ ಪ್ರತಿಭಟನೆ ಮಾಡಿದರೂ ಪ್ರಯೋಜನವಾಗಿಲ್ಲ. ಜನ ಕೂಡ ಈ ಸಮಸ್ಯೆ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತಬೇಕುಶರಣು ಪಾಟೀಲ ಎಐಡಿವೈಒ ಜಿಲ್ಲಾ ಕಾರ್ಯದರ್ಶಿ
ಕೊಪ್ಪಳಕ್ಕೆ ನಿತ್ಯ ಲಕ್ಷಾಂತರ ಜನ ಭೇಟಿ ನೀಡುತ್ತಿದ್ದರೂ ರಸ್ತೆಗಳ ಸ್ಥಿತಿ ಮಾತ್ರ ಸರಿಯಾಗಿಲ್ಲ. ಭಾರಿ ವಾಹನಗಳ ಓಡಾಟದ ಭಾರವೂ ಆಗುತ್ತಿದ್ದು ರಸ್ತೆಗಳು ಮತ್ತಷ್ಟು ಹದಗೆಟ್ಟಿವೆ. ಇದು ಹೀಗೆಯೇ ಮುಂದುವರಿದರೆ ಹೋರಾಟ ಮಾಡಬೇಕಾಗುತ್ತದೆ.ಎಸ್. ಮೈಲಾರಪ್ಪ ವಕೀಲ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.