ಸ್ಥಳೀಯ ಚುನಾವಣೆಗೆ ಸಜ್ಜಾಗಿ: ಬಿ.ಸಿ.ಪಾಟೀಲ

ಅಳವಂಡಿ: ಪ್ರದೀಪ ಗೌಡ ಮಾಲಿ ಪಾಟೀಲ ಅವರು ಭಾರತೀಯ ಜನತಾ ಪಾರ್ಟಿಗೆ ಸೇರಿದ್ದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಅಳವಂಡಿ ಸಮೀಪದ ಕವಲೂರು ಗ್ರಾಮದಲ್ಲಿ ನಡೆದ ಜೆಡಿಎಸ್ ಮುಖಂಡ ಪ್ರದೀಪ ಗೌಡ ಪಾಟೀಲ ಹಾಗೂ ಶರಣಪ್ಪಗೌಡ ಪಾಟೀಲ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತದೆ. ಬಿಜೆಪಿ ಪ್ರಪಂಚದಲ್ಲಿಯೇ ಅತಿ ಹೆಚ್ಚು ಕಾರ್ಯ ಕರ್ತರನ್ನು ಹೊಂದಿದೆ. ಹಾಗಾಗಿ ಮುಂಬರುವ ತಾ.ಪಂ, ಜಿ.ಪಂ ಚುನಾವಣೆಯನ್ನು ಎದುರಿಸಲು ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು. ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರೇ ಆಗಲಿ ಗೆಲ್ಲಿಸಿ ಎಂದರು.
ಸಂಸದ ಸಂಗಣ್ಣ ಕರಡಿ ಮಾತನಾಡಿ, ಈ ಭಾಗದಲ್ಲಿ ಕೃಷಿ ಅವಲಂಬಿಸಿರುವ ಗ್ರಾಮಗಳಿವೆ. ಶಿಂಗಟಾಲೂರ ಏತ ನೀರಾವರಿ ಯೋಜನೆ ಬಗ್ಗೆ ಚರ್ಚಿಸಿ ಪೂರ್ಣಗೊಳಿಸಲಾಗುವುದು. ಈ ಭಾಗದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದರು.
ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಮಹಾಂತೇಶ ಪಾಟೀಲ, ಬಿಜೆಪಿ ಮಂಡಲ ತಾಲ್ಲೂಕು ಅಧ್ಯಕ್ಷ ಪ್ರದೀಪ ಹಿಟ್ನಾಳ, ಈಶಪ್ಪ ಮಾದಿನೂರ, ಸುನಂದಾ ಗದ್ದಿಕೇರಿ, ಡಿ.ಮಲ್ಲಣ್ಣ ಹಾಗೂ ಪಕ್ಷದ ಮುಖಂಡರು, ಕಾರ್ಯ ಕರ್ತರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.