ಮಂಗಳವಾರ, ಏಪ್ರಿಲ್ 7, 2020
19 °C

ಕೊಪ್ಪಳ ಪರೀಕ್ಷಾ ಕೇಂದ್ರ: ಶೌಚಾಲಯ ಸಿದ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೊಪ್ಪಳ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಬಾಲಕರು ಮತ್ತು ಬಾಲಕಿಯರಿಗೆ ಅಗತ್ಯವಿರುವಷ್ಟು ಶೌಚಾಲಯ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ.

‘1,100 ವಿದ್ಯಾರ್ಥಿಗಳಿಗೆ ಶೌಚಾಲಯ ಇಲ್ಲ’ ಎಂಬ ಸುದ್ದಿ ‘ಪ್ರಜಾವಾಣಿ’ಯಲ್ಲಿ ಮಂಗಳವಾರ ಪ್ರಕಟವಾಗಿತ್ತು. ತಕ್ಷಣ ಸ್ಪಂದಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌, ಕೊಪ್ಪಳದ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ಮಾತನಾಡಿ, ತಕ್ಷಣವೇ ಶೌಚಾಲಯ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದ್ದರು.

ಅದರಂತೆ ಲಭ್ಯ ಇರುವ ಶೌಚಾಲಯಗಳನ್ನು ಸ್ವಚ್ಛಗೊಳಸಿ ನೀರಿನ ವ್ಯವಸ್ಥೆ ಮಾಡಲಾಯಿತು. ಬಾಲಕಿಯರಿಗೆ ಪ್ರೌಢಶಾಲಾ ವಿಭಾಗದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು