ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಅನ್ಯಾಯವಾಗಲ್ಲ: ಪಾಟೀಲ

Published 17 ಏಪ್ರಿಲ್ 2024, 5:56 IST
Last Updated 17 ಏಪ್ರಿಲ್ 2024, 5:56 IST
ಅಕ್ಷರ ಗಾತ್ರ

ಕೊಪ್ಪಳ: ಗೊಂದಲಕ್ಕೆ ಅವಕಾಶವಿಲ್ಲದಂತೆ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ನೇಮಕಕ್ಕೆ ಆದ್ಯತೆ ನೀಡಲಾಗುವುದು, ಏನೇ ಕಾನೂನು ತೊಡಕುಗಳು ಇದ್ದರೂ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಕಾನೂನು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ಅನ್ವಯ ವಿಶೇಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಚ್‌.ಕೆ.ಪಾಟೀಲ ಬರೆದಿದ್ದಾರೆ ಎನ್ನಲಾದ ಹಳೆಯ ಪತ್ರ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ. ಇದನ್ನು ಮುಂದಿಟ್ಟುಕೊಂಡು ಕೆಲವರು ಪ್ರತಿಭಟನೆ ಮಾಡುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಸಚಿವರು, ‘ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕೇಂದ್ರೀಕೃತ ದಾಖಲಾತಿ ಘಟಕ ಸಂಸ್ಥೆಗಳ ನೇಮಕಾತಿ ವೇಳೆ ಕ.ಕ. ಜಿಲ್ಲೆಗಳಿಗೆ ಆದ್ಯತೆ ನೀಡಬೇಕು ಎನ್ನುವ ನಿಲುವಿನಲ್ಲಿ ರಾಜ್ಯ ಸರ್ಕಾರದ ನಿಲುವು ಅಚಲವಾಗಿದೆ’ ಎಂದರು.

‘371 (ಜೆ) ವಿಶೇಷ ಮೀಸಲಾತಿ ಬಗ್ಗೆ ಹಲವು ಜಿಲ್ಲೆಗಳಿಂದ ದೂರುಗಳು ಬಂದಿದ್ದು ಈ ದೂರಿನಲ್ಲಿ ರಾಜ್ಯಪಾಲರು ಹೊರಡಿಸಿರುವ ಮೂಲ ಗೆಜೆಟ್‌ ಕಾಯ್ದೆ, ನಿಯಮಗಳು ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಜಾರಿ ಮಾಡಲಾಗುತ್ತಿದೆ ಎನ್ನುವ ಅಂಶ ಉಲ್ಲೇಖಿಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ ಈ ಭಾಗಕ್ಕೆ ನೀಡಿರುವ ವಿಶೇಷ ಸವಲತ್ತು ವಾಪಸ್‌ ಪಡೆಯುವ ಚಿಂತನೆ ನಡೆಸಿಲ್ಲ’ ಎಂದು ತಿಳಿಸಿದರು.

‘ವೈರಲ್‌ ಆಗಿರುವ ಪತ್ರದ ಅಸಲಿತನದ ಬಗ್ಗೆ ಪರಿಶೀಲನೆ ಮಾಡುವೆ. ಅಧಿಕಾರಿಗಳಿಂದ ತಪ್ಪಾಗಿದ್ದರೆ ಸರಿಪಡಿಸುವೆ’ ಎಂದು ಹೇಳಿದರಾದರೂ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವ ಪತ್ರ ಅಸಲಿಯೇ? ನಕಲಿಯೇ? ಎನ್ನುವ ಪ್ರಶ್ನೆಗೆ ಮಾತ್ರ ನಿಖರ ಉತ್ತರ ನೀಡಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT