ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಗಿರಿ | ಲಕ್ಷ ದೀಪೋತ್ಸವ: ಪೂರ್ವಭಾವಿ ಸಭೆ

Published 30 ನವೆಂಬರ್ 2023, 15:19 IST
Last Updated 30 ನವೆಂಬರ್ 2023, 15:19 IST
ಅಕ್ಷರ ಗಾತ್ರ

ಕನಕಗಿರಿ: ಲಕ್ಷ ದೀಪೋತ್ಸವ ಆಚರಣೆಗೆ ಸಂಬಂಧಿಸಿದಂತೆ ಇಲ್ಲಿನ ಕನಕಾಚಲಪತಿ ದೇವಸ್ಥಾನದಲ್ಲಿ ಬುಧವಾರ ಗ್ರಾಮಸ್ಥರ ಪೂರ್ವಭಾವಿ ಸಭೆ ನಡೆಯಿತು. ಗ್ರೇಡ್-2 ತಹಶೀಲ್ದಾರ್ ವಿರೂಪಾಕ್ಷಪ್ಪ ಹೊರಪೇಟೆ ಮಾತನಾಡಿ ‘ಲಕ್ಷ ದೀಪೋತ್ಸವ ಆಚರಣೆ ಮಾಡಬೇಕೆಂಬುದು ಭಕ್ತರ ಒತ್ತಾಸೆಯಾಗಿದೆ, ಮುಜರಾಯಿ ಇಲಾಖೆಯ ವತಿಯಿಂದ ಡಿ.12ರಂದು ಕಾರ್ತಿಕ ಅಮಾವಾಸ್ಯೆ ದಿನ ಆಚರಣೆ ಮಾಡಲಾಗುವುದು’ ಎಂದು ತಿಳಿಸಿದರು.

ದೇಗುಲವನ್ನು ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಲಾಗುವುದು, ಸಾವಿರಾರು ಭಕ್ತರು ಬರುವ ನಿರೀಕ್ಷೆ ಇದ್ದು ಭಕ್ತರಿಗೆ ಹುಗ್ಗಿ, ಬದನೆಕಾಯಿ ಪಲ್ಲೆ, ಅನ್ನ ಸಾಂಬಾರು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಬರ ಆವರಿಸಿರುವ ಹಿನ್ನೆಲೆಯಲ್ಲಿ ಕಲಾ ತಂಡಗಳ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಸುವ ಯೋಚನೆ ತಾಲ್ಲೂಕು ಆಡಳಿತದ ಮುಂದೆ ಇಲ್ಲ, ಭಕ್ತರು ತಮ್ಮ ಕಾಣಿಕೆ, ಧವಸ– ಧಾನ್ಯ ಇತರೆ ಸಾಮಾಗ್ರಿಗಳನ್ನು ನೇರವಾಗಿ ದೇವಸ್ಥಾನ ಸಮಿತಿಗೆ ನೀಡಬೇಕು ಎಂದು ಕೋರಿದರು.

ಕೃಷಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ.ಕನಕಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಗಂಗಾಧರಸ್ವಾಮಿ ಕಲ್ಲಬಾಗಿಲಮಠ, ದುರ್ಗಾದಾಸ ಯಾದವ ಮಾತನಾಡಿದರು.

ಪಟ್ಟಣ ಪಂಚಾಯಿತಿ ಸದಸ್ಯ ಸುರೇಶ ಗುಗ್ಗಳಶೆಟ್ರ, ದೇವಸ್ಥಾನ ಸಮಿತಿ ಅಧ್ಯಕ್ಷ ನಾಗರಾಜ ತೆಗ್ಯಾಳ, ಸದಸ್ಯರಾದ ಕೀರ್ತಿಕುಮಾರ ಸೋನಿ, ವೆಂಕಟೇಶ ಸೌದ್ರಿ, ವೀರೇಶ ಕಡಿ, ನಾಗಪ್ಪ ಕೋರೆಡ್ಡಿ, ಪ್ರಮುಖರಾದ ವೀರೇಶ ಸಮಗಂಡಿ, ಬಸನಗೌಡ ಪಾಟೀಲ, ಸೇರಿದಂತೆ ಮುಖಂಡರು, ಜನಪ್ರತಿನಿಧಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT