ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ: ಪ್ರಜಾಧ್ವನಿ-2 ಪ್ರಚಾರ ಕಾರ್ಯಕ್ರಮಕ್ಕೆ ಸಿದ್ಧತೆ

Published 29 ಏಪ್ರಿಲ್ 2024, 15:47 IST
Last Updated 29 ಏಪ್ರಿಲ್ 2024, 15:47 IST
ಅಕ್ಷರ ಗಾತ್ರ

ಗಂಗಾವತಿ: ಇಲ್ಲಿನ ಕನಕಗಿರಿ ರಸ್ತೆಯಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಇಂದು (ಮಂಗಳವಾರ) ಸಂಜೆ 6 ಗಂಟೆಗೆ ಕಾಂಗ್ರೆಸ್ ಪಕ್ಷದಿಂದ ನಡೆಯುವ ಪ್ರಜಾಧ್ವನಿ-2 ಲೋಕಸ ಭಾಚುನಾವಣಾ ಪ್ರಚಾರ ಸಭೆ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧಪಡಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಗಂಗಾವತಿ, ಕನಕಗಿರಿ, ಕಾರಟಗಿ, ಕೊಪ್ಪಳ ಕ್ಷೇತ್ರ ದಿಂದ ಸಾವಿರಾರು ಸಂಖ್ಯೆಯ ಜನರು ಸೇರಲಿದ್ದಾರೆ. ಈಗಾಗಲೇ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಿಸಿ, ಮೈದಾನ ಸುತ್ತ, ಮಧ್ಯಭಾಗದಲ್ಲಿ ಕಬ್ಬಿಣದ ಬ್ಯಾರಿಕೇಡ್ ಅಳವಡಿಸಲಾಗಿದೆ.

ಇನ್ನೂ ಸಾರ್ವಜನಿಕರು ಕುಳಿತುಕೊಳ್ಳಲು ಅಪಾರ ಸಂಖ್ಯೆ ಕುರ್ಚಿಗಳು ಹಾಕಿದ್ದು, ಜನರಿಗೆ ಕತ್ತಲೂ ಆಗದಂತೆ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಅಭ್ಯರ್ಥಿ ರಾಜಶೇಖರ ಹಿಟ್ನಾಳ, ಕಾಂಗ್ರೆಸ್ ಪಕ್ಷ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಸಚಿವ ಶಿವರಾಜ ತಂಗಡಿ, ಶಾಸಕ ರಾಘವೇಂದ್ರ ಹಿಟ್ನಾಳ, ಹಂಪನ ಗೌಡ ಬಾದರ್ಲಿ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಮಲ್ಲಿಕಾ ರ್ಜುನ ನಾಗಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್ ಶ್ರೀನಾಥ ಸೇರಿ ಪಕ್ಷದ ನಾಯಕರು ಆಗಮಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT