ಕಾರಟಗಿ: ಕೋವಿಡ್ 3ನೇ ಅಲೆ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ಸಮಾಲೋಚಿಸಲು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಶನಿವಾರ ಅಧಿಕಾರಿಗಳ ಸಭೆ ನಡೆಸಿದರು.

ಪಟ್ಟಣದ ವಿಶೇಷ ಎಪಿಎಂಸಿ ಸಭಾಂಗಣದಲ್ಲಿ ಕಾರಟಗಿ ಹಾಗೂ ಕನಕಗಿರಿ ತಾಲ್ಲೂಕುಗಳ ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಭೆಯಲ್ಲಿ ಸಚಿವರು ಜಿಲ್ಲಾ ಆರೋಗ್ಯಾಧಿಕಾರಿ ಲಿಂಗಾರೆಡ್ಡಿಯವರಿಂದ ಮಾಹಿತಿ ಪಡೆದರು.

ನಂತರ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಕೋವಿಡ್ 3ನೇ ಅಲೆ ಆರಂಭಗೊಂಡಿದ್ದು, ಸೆಪ್ಟಂಬರ್ ವೇಳೆಗೆ ತೀವ್ರವಾಗುವ ಅಂದಾಜಿದೆ. ಆ.1ರಿಂದ ಇಲ್ಲಿಯವರೆಗೆ ಕಾರಟಗಿ ತಾಲ್ಲೂಕಿನಲ್ಲಿ 1 ಹಾಗೂ ಕನಕಗಿರಿ ತಾಲ್ಲೂಕಿನಲ್ಲಿ 2 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ತಾಲ್ಲೂಕಿನಲ್ಲಿ ಸೋಂಕು ನಿಯಂತ್ರಣಕ್ಕೆ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಕನಕಗಿರಿಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಆಸ್ಪತ್ರೆ ಆರಂಭಿಸುವ ಚಿಂತನೆ ಇದೆ ಎಂದರು.

ಶಾಸಕ ಬಸವರಾಜ ದಢೇಸುಗೂರ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗಾರೆಡ್ಡಿ ಮಾತನಾಡಿದರು.

ಜಿಲ್ಲೆಗೆ 8 ಕೋಟಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹ 8 ಕೋಟಿ ಅನುದಾನ ಬಂದಿದ್ದು, ಪ್ರತಿ ತಾಲ್ಲೂಕಿಗೆ ₹ ಕೋಟಿಯಂತೆ ಹಂಚಿಕೆ ಮಾಡಲು ತಿಳಿಸಲಾಗಿದೆ.
ಆಸ್ಪತ್ರೆಗಳಲ್ಲಿ ಉಪಕರಣಗಳ ಖರೀದಿ ಸೇರಿದಂತೆ ಆರೋಗ್ಯ ವಲಯಕ್ಕೆ ಬಳಸುವಂತೆ ಉಸ್ತುವಾರಿ ಸಚಿವರು ಸೂಚಿಸಿದರು.

ರಾಜ್ಯದಲ್ಲಿ ಮರಳು ಕೊರತೆ ನೀಗಿಸಲು ಎಂ- ಸ್ಯಾಂಡ್ ಉತ್ಪಾದನೆಗೆ ಚಿಂತನೆ ನಡೆದಿದ್ದು, ಇದರಿಂದ ಮರಳಿನ ಕಾಳಸಂತೆಗೆ ಕಡಿವಾಣ ಹಾಕಬಹುದು. ಈ ನಿಟ್ಟಿನಲ್ಲಿ ಜಿಲ್ಲೆಯ
ಅಧಿಕಾರಿಗಳು ಸಮಗ್ರವಾಗಿ ವರದಿ ಕಳಿಸುವಂತೆ ತಿಳಿಸಿದರು.

ಗೋಮಾಳ, ಗೈರಾಣು ಭೂಮಿಯಲ್ಲಿ ನೆಲೆಸಿರುವ ಹಾಗೂ ಕೃಷಿ ಚಟುವಟಿಕೆ ನಡೆಸುತ್ತಿರುವ ಅರ್ಹ ಕುಟುಂಬಗಳಿಗೆ ಭೂಮಿ ಮಂಜೂರುಗೊಳಿಸುವ ಕುರಿತು ಶಾಸಕ ದಢೇಸೂಗೂರು ಪ್ರಶ್ನೆ ಎತ್ತಿದಾಗ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಸ್ಪಷ್ಟನೆ ನೀಡಿದರು.

ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನ್ನುಮ್, ಸಹಾಯಕ ಆಯುಕ್ತ
ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್, ಡಿವೈಎಸ್ಪಿ ಆರ್. ಎಸ್.ಉಜ್ಜನಕೊಪ್ಪ, ಇನ್‌ಸ್ಪೆಕ್ಟರ್ ಉದಯರವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.