ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ‘ಮಕ್ಕಳ ಜ್ಞಾನಭಿವೃದ್ಧಿಗೆ ಪ್ರಯತ್ನಿಸಿ’ 

Last Updated 29 ಏಪ್ರಿಲ್ 2022, 11:25 IST
ಅಕ್ಷರ ಗಾತ್ರ

ಅಳವಂಡಿ: ‘ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಜ್ಞಾನಾಭಿವೃದ್ಧಿಗೆ ಪ್ರಯತ್ನಿಸಬೇಕು’ ಎಂದು ಅಂಗನವಾಡಿ ಮೇಲ್ವಿಚಾರಕಿ ಪ್ರೀತಿ ಕೋರೆ ಸಲಹೆ ನೀಡಿದರು.

ಸಮೀಪದ ಕವಲೂರು ಗ್ರಾಮದ ನಾಲ್ಕನೇ ಅಂಗನವಾಡಿ ಕೇಂದ್ರದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಲಿಕಾ ಟಾಟಾ ಟ್ರಸ್ಟ್‌ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ನಡೆದ 4 ದಿನಗಳ ಶಾಲಾ ಪೂರ್ವ ಶಿಕ್ಷಣ ತರಬೇತಿ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು.

ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗೊಳಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಪ್ರಮುಖ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ರೆಹಮತಬಿ, ಕವಲೂರು, ಗುಡಗೇರಿ, ಘಟ್ಟಿರಡ್ಡಿಹಾಳ, ಹಟ್ಟಿ, ಬೆಳಗಟ್ಟಿ, ಮುರ್ಲಾಪುರ, ರಘುನಾಥನಹಳ್ಳಿ, ಹೈದರನಗರ, ಕೇಸಲಾಪುರ ಹಾಗೂ ನಿಲೋಗಿಪುರ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT