ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ: ವಾಲ್ಮೀಕಿ-ನಾಯಕ ಸಮಾಜದಿಂದ 15ರಂದು ಪ್ರತಿಭಟನೆ

7

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ: ವಾಲ್ಮೀಕಿ-ನಾಯಕ ಸಮಾಜದಿಂದ 15ರಂದು ಪ್ರತಿಭಟನೆ

Published:
Updated:
Deccan Herald

ಕೊಪ್ಪಳ: ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಒತ್ತಾಯಿಸಲಾಗುವುದು ಎಂದು ಜಿಲ್ಲಾ ವಾಲ್ಮೀಕಿ ಹೋರಾಟ ಸಮಿತಿ ಅಧ್ಯಕ್ಷ ಸುರೇಶ ಡೊಣ್ಣಿ ಒತ್ತಾಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ವಾಲ್ಮೀಕಿ ಜನಾಂಗಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಶೇ 7.5 ಮೀಸಲಾತಿ ಜಾರಿಗೊಳಿಸಬೇಕು. ಆದರೆ 10 ವರ್ಷಗಳ ಹಿಂದೆ ಕೇಂದ್ರ ಸರ್ಕಾರದ ಕುಲದೀಪ ಸಿಂಗ್ ಆಯೋಗದ ವರದಿ ಪ್ರಕಾರ ರಾಜ್ಯ ಸರ್ಕಾರ ಶೇ 3ರಷ್ಟು ಮೀಸಲಾತಿ ನಿಗದಿಗೊಳಿಸಲಾಗಿದೆ ಎಂದು ಹೇಳಿದರು.

ಇಲ್ಲಿಯವರೆಗೂ ಸಮಾಜದ ಜನಾಂಗಕ್ಕೆ ಮೀಸಲಾತಿ ವಿಷಯದಲ್ಲಿ ಅನ್ಯಾಯವಾಗುತ್ತಾ ಬಂದಿದೆ. ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ, ಅ.15 ರಂದು ಕಲಬುರ್ಗಿಯಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸರ್ಕಾರ ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿ ವಿಷಯದಲ್ಲಿ ಮೂಗಿಗೆ ತುಪ್ಪು ಹಚ್ಚುವ ಕೆಲಸ ಮಾಡುತ್ತಿದೆ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಎಂದು ಅವರು ತಿಳಿಸಿದರು.

ಹೋರಾಟದಲ್ಲಿ ರಾಜ್ಯದ ಸುಮಾರು 2 ಲಕ್ಷದಷ್ಟು ಸಮಾಜದ ಜನರು ಸೇರುವ ನಿರೀಕ್ಷೆ ಇದೆ. ಕೊಪ್ಪಳ ಜಿಲ್ಲೆಯಿಂದ ವಾಲ್ಮೀಕಿ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

ವಾಲ್ಮೀಕಿ ನಾಯಕ ಸಮಾಜದ ಕೊಪ್ಪಳ ತಾಲ್ಲೂಕು ಘಟಕದ ಅಧ್ಯಕ್ಷ ಶರಣಪ್ಪ ನಾಯಕ, ಮುಖಂಡರಾದ ದೇವೇಂದ್ರಪ್ಪ ಗುನ್ನಳ್ಳಿ, ಬಸವರಾಜ ಬನ್ನಿಕೊಪ್ಪ, ಶ್ರೀನಿವಾಸ ಪೂಜಾರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !