ಗುರುವಾರ , ಮೇ 19, 2022
23 °C

ಬಿಜೆಪಿ ಸೇರಿದ್ದು ಕಾಂಗ್ರೆಸ್‌ನವರಲ್ಲ: ಕಾಂಗ್ರೆಸ್ ಎಸ್ಸಿ ಮೋರ್ಚಾ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರಟಗಿ: ‘ಶಾಸಕ ಬಸವರಾಜ ದಢೇಸೂಗೂರು ಅವರ ನೇತೃತ್ವದಲ್ಲಿ ಈಚೆಗೆ ತಾಲ್ಲೂಕಿನ ಈಳಿಗನೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಿದವರು ಕಾಂಗ್ರೆಸ್‌ನವರಲ್ಲ’ ಎಂದು ಬ್ಲಾಕ್ ಕಾಂಗ್ರೆಸ್ ಎಸ್ಸಿ ಮೋರ್ಚಾ ಅಧ್ಯಕ್ಷ ಎಂ.ಶಿವಕುಮಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಶಾಸಕರ ನೇತೃತ್ವದಲ್ಲಿ 50 ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾಗಿದ್ದಾರೆಂಬುದು ಸುಳ್ಳು. ಅಲ್ಲಿ ಸೇರಿದ್ದು, ಬಿಜೆಪಿಯವರೇ ಆಗಿದ್ದಾರೆ’ ಎಂದು ಆರೋಪಿಸಿದರು. ಬ್ಲಾಕ್ ಕಾಂಗ್ರೆಸ್‍ನ ವಿವಿಧ ಘಟಕಗಳ ವೀರೇಶ ಈಳಿಗನೂರು, ಬಸವರಾಜ ಬಡಿಗೇರ, ಹುಲಗಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.