ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು’

ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ
Last Updated 5 ಜುಲೈ 2021, 3:42 IST
ಅಕ್ಷರ ಗಾತ್ರ

ತಾವರಗೇರಾ: ‘ಗ್ರಾಮೀಣ ಪ್ರದೇಶದ ರಸ್ತೆಗಳು ಸುಧಾರಣೆಯಾಗಬೇಕು ಎನ್ನುವ ಉದ್ದೇಶದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಜಾರಿಗೆ ತಂದರು. ಆ ಮೂಲಕ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿದರು’ ಎಂದು ಸಂಸದ ಸಂಗಣ್ಣ ಕರಡಿ ತಿಳಿಸಿದರು.

ತಾವರಗೇರಾ–ನಂದಾಪೂರ ಗ್ರಾಮದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಮಾಜಿ ಪ್ರಧಾನಿ ವಾಜಪೇಯಿ ಅವರು ಗ್ರಾಮೀಣ ಪ್ರದೇಶದ ಸಂಪರ್ಕಕ್ಕೆ ರಸ್ತೆಗಳನ್ನು ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ತಾವರ
ಗೇರಾ–ನಂದಾಪೂರ, ನಂದಾಪೂರ–ನವಲಹಳ್ಳಿ, ನವಲಹಳ್ಳಿ– ಜುಮಲಾಪೂರ, ಒಟ್ಟು 15.915 ಕಿ.ಮೀ ದೂರದ ರಸ್ತೆಯನ್ನು ₹11.83 ಕೋಟಿ ವೆಚ್ಚದಲ್ಲಿ ಡಾಂಬರೀಕರಣ ಮಾಡಲಾಗುತ್ತಿದೆ ಎಂದು ಹೇಳಿದರು.

ಗುತ್ತಗೆದಾರರು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಳಪೆ ಕಾಮಗಾರಿ ನಡೆದರೆ ಸಾರ್ವಜನಿಕರು ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು. ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಈ ರಸ್ತೆಯನ್ನು ಐದು ವರ್ಷ ನಿರ್ವಹಣೆ ಹಾಗೂ ಆರನೇ ವರ್ಷದಲ್ಲಿ ಮರು ಡಾಂಬರೀಕರಣ ಮಾಡಲಾಗುತ್ತದೆ ಎಂದು ಹೇಳಿದರು. ಶಾಸಕ ಅಮರೇಗೌಡ ಬಯ್ಯಾಪುರ ಮಾತನಾಡಿ,‘ರಸ್ತೆ ನಿರ್ಮಾಣ ಮತ್ತು ಡಾಂಬರೀಕರಣ ಮಾಡುವ ಸಂದರ್ಭದಲ್ಲಿ ಅಕ್ಕ-ಪಕ್ಕದ ಜಮೀನಿನ ಮಾಲೀಕರು ಸಹಕಾರ ನೀಡಬೇಕು’ ಎಂದರು. ಉದ್ಯಮಿ ಬಸನಗೌಡ ಮಾಲಿಪಾಟೀಲ, ವೀರಭದ್ರಪ್ಪ ನಾಲತವಾಡ, ಪ.ಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್, ಚಂದ್ರಶೇಖರ ನಾಲತವಾಡ, ಮಂಜುನಾಥ ಜೂಲಕುಂಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುದ್ರಗೌಡ ಕುಲಕರ್ಣಿ, ಮರೇಗೌಡ ನಂದಾಪೂರ, ದುರಗೇಶ ಇದ್ಲಾಪೂರು, ಬಾಳಪ್ಪ ಹಾಗಲದಾಳ ಹಾಗೂ ದೊಡ್ಡನಗೌಡ ಜುಮಲಾಪೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT