ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವೀರಸೇನಾನಿಗಳ ಬಲಿದಾನವೇ ಸ್ವಾತಂತ್ರ್ಯ: ಕುಲಪತಿ ಪ್ರೊ.ಬಿ.ಕೆ ರವಿ

Published : 15 ಆಗಸ್ಟ್ 2024, 15:36 IST
Last Updated : 15 ಆಗಸ್ಟ್ 2024, 15:36 IST
ಫಾಲೋ ಮಾಡಿ
Comments

ಕುಕನೂರು: ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಅಮರ ವೀರರ ಬಗ್ಗೆ ಅಧ್ಯಾಪಕರು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ ರವಿ ಹೇಳಿದರು.

ತಾಲ್ಲೂಕಿನ ತಳಕಲ್ ಗ್ರಾಮದಲ್ಲಿನ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ವಾತಂತ್ರ್ಯ ದಿನೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ‘ಗಾಂಧೀಜಿಯವರು ಸ್ವಾತಂತ್ರ್ಯ ಚಳವಳಿಗಾಗಿ ಬಂದ್‌ಗೆ ಕರೆ ಕೊಟ್ಟರೆ ಜನರೆಲ್ಲರೂ ಒಗ್ಗಟ್ಟಿನಿಂದ ಸೇರು, ಯಶಸ್ವಿಗೊಳಿಸುತ್ತಿದ್ದರು’ ಎಂದರು.

‘ಸಮಾನತೆಯಿಂದ ಬದುಕುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದ್ದು, ಅದರ ಮಹತ್ವ ಅರಿತು ಬಾಳಿದರೆ ನಮ್ಮ ಮುಂದಿನ ಪೀಳಿಗೆ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.

ನಿರ್ದೇಶಕ ಪ್ರಕಾಶ ಯಳವಟ್ಟಿ, ಇಂಗ್ಲಿಷ್ ಪ್ರಾಧ್ಯಾಪಕ ಚಾಂದ್ ಪಾಶಾ, ಜಡಿಯಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT