ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಕಾರ್ಯಗಳಲ್ಲಿ ಮಕ್ಕಳ ಬಳಕೆ ನಿಷೇಧ: ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್

Published 29 ಮಾರ್ಚ್ 2024, 6:47 IST
Last Updated 29 ಮಾರ್ಚ್ 2024, 6:47 IST
ಅಕ್ಷರ ಗಾತ್ರ

ಕೊಪ್ಪಳ: ಚುನಾವಣೆಗೆ ಸಂಬಂಧಿಸಿದ ಯಾವುದೇ ಕಾರ್ಯಗಳಲ್ಲಿ ರಾಜಕೀಯ ಪಕ್ಷಗಳು ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ. ಇದಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್ ಹೇಳಿದ್ದಾರೆ.

ಮಕ್ಕಳ ಹಕ್ಕುಗಳ ಒಪ್ಪಂದ ಹಾಗೂ ಮಕ್ಕಳ ನ್ಯಾಯ ಹಾಗೂ ತಿದ್ದುಪಡಿ ಕಾಯ್ದೆ-2021ರನ್ವಯ 18 ವರ್ಷದೊಳಗಿನ ಎಲ್ಲಾ ಮಾನವ ಜೀವಿಗಳು ಮಕ್ಕಳು ಎಂದು ಪರಿಗಣಿಸಲಾಗಿದೆ. ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಮಕ್ಕಳು ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನವಿದೆ.

‘ಚುನಾವಣಾ ಆಯೋಗವು ಚುನಾವಣಾ ಕಾರ್ಯಗಳಲ್ಲಿ ಅಥವಾ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿರುವ ಕುರಿತು ಪ್ರಕಟಣೆ ಸಹ ಹೊರಡಿಸಿದೆ. ಒಂದು ವೇಳೆ ಕಾಯ್ದೆಯನ್ನು ಉಲ್ಲಂಘಿಸಿ ಮಕ್ಕಳನ್ನು ಕೆಲಸ ಅಥವಾ ಇನ್ನಾವುದೇ ಕಾರ್ಯಗಳಲ್ಲಿ ನೇಮಿಸಿಕೊಂಡಲ್ಲಿ 2 ವರ್ಷಗಳ ತನಕ ವಿಸ್ತರಿಸಬಹುದಾದ ಜೈಲು ₹50 ಸಾವಿರ ದಂಡ ವಿಧಿಸಬಹುದಾಗಿದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಆದ್ದರಿಂದ ಎಲ್ಲಾ ಅಧಿಕಾರಿಗಳು, ಚುನಾವಣಾ ಜಾಗೃತ ದಳಗಳು, ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರು ಯಾವುದೇ ಚುನಾವಣಾ ಕಾರ್ಯಗಳಲ್ಲಿ ಮಕ್ಕಳ ಪಾಲ್ಗೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT