ಸೋಮವಾರ, ಜನವರಿ 18, 2021
15 °C
ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯಲ್ಲಿ ಪಿಡಿಒ ರಾಮು ನಾಯಕ ಸಲಹೆ

ಮಕ್ಕಳ ಹಕ್ಕುಗಳನ್ನು ರಕ್ಷಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ‘ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮು ನಾಯಕ ಅಭಿಪ್ರಾಯಪಟ್ಟರು.

ಸಮೀಪದ ಹಿರೇಖೇಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿದರು.

‘ಪಾಲಕರು ಮಕ್ಕಳ ಆಸಕ್ತಿ, ಅಭಿರುಚಿಗೆ ತಕ್ಕಂತೆ ಶಿಕ್ಷಣ ಕೊಡಿಸಬೇಕು. ಬಡತನದ ನೆಪದಲ್ಲಿ ಮಕ್ಕಳ ಶಿಕ್ಷಣವನ್ನು ಕುಂಠಿತಗೊಳಿಸಬಾರದು’ ಎಂದು ಹೇಳಿದರು.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಯಾದಿ ತಯಾರಿಸಿ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

‘ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ ಕಾನೂನು ಬಾಹಿರ. ಹೋಟೆಲ್, ಗಾರೆ ಕೆಲಸದಲ್ಲಿ ಮಕ್ಕಳನ್ನು ಬಳಸಿಕೊಳ್ಳಬಾರದು ಹಾಗೊಂದು ವೇಳೆ ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.

ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಚಂದುಸಾಬ, ಅಂಗನವಾಡಿ ಕಾರ್ಯಕರ್ತೆಯರ ಮೇಲ್ವಿಚಾರಕಿ ಶ್ರೀದೇವಿ ಮಾತನಾಡಿದರು.

ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ ಇದೆ. ವಿವಿಧ ಶಾಲೆಗಳಲ್ಲಿ ಮೈದಾನ, ಕುಡಿಯುವ ನೀರು, ಶೌಚಾಲಯ ಸಮಸ್ಯೆ ಇದೆ. ಗ್ರಾಮೀಣ ಭಾಗಕ್ಕೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಮುಖ್ಯಶಿಕ್ಷಕ ಶ್ರೀನಿವಾಸ ಹುನಗುಂದ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ತಿಪ್ಪೇಶ, ಶಿಕ್ಷಕರಾದ ತಿಪ್ಪಣ್ಣ ಹಾಗೂ ಗಣೇಶ ಪೂಜಾರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.