ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಗಿರಿ| ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಪ್ರತಿಭಟನೆ

Published 9 ಜುಲೈ 2023, 7:43 IST
Last Updated 9 ಜುಲೈ 2023, 7:43 IST
ಅಕ್ಷರ ಗಾತ್ರ

ಕನಕಗಿರಿ: ತಾಲ್ಲೂಕಿನ ಸಮೀಪದ ಮುಸಲಾಪುರ ಗ್ರಾಮದ ಬಾರ್ ಮುಂದೆ ಕುರಿಗಾಯಿ ಯುವಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಮಾಡಿದ್ದಾನೆ ಎಂದು ಆರೋಪಿಸಿ ಇಂಗಳದಾಳ ತಾಂಡಾದ ನಿವಾಸಿಗಳು ಶನಿವಾರ ಪ್ರತಿಭಟನೆ ನಡೆಸಿದರು.

ಈ ತಾಂಡಾದ ಮಕ್ಕಳು ಶಾಲೆ ಮುಗಿಸಿಕೊಂಡು ಮನೆಗೆ ಮರಳುವಾಗ ಮಳೆ ಸುರಿಯಿತು‌‌. ಆಗ ವಿದ್ಯಾರ್ಥಿನಿಯರು ಆಶ್ರಯಕ್ಕಾಗಿ ಬಾರ್ ವೊಂದರ ಬಳಿ ನಿಂತಾಗ ಕೆಲವರು ಅಸಭ್ಯ ವರ್ತನೆ ತೋರಿದ್ದಾರೆ ಎಂದು ತಾಂಡದ ಜನ ಆರೋಪಿಸಿದ್ದಾರೆ.

ಬಾರ್ ಮುಂದೆ ತೆರಳುತ್ತಿದ್ದಾಗ ವಿದ್ಯಾರ್ಥಿನಿಯರ ಜೊತೆ ಯುವಕ ಅಸಭ್ಯವಾಗಿ ವರ್ತಿಸಿದ್ದಾನೆ ನಂತರ ಬಾರ್ ನಲ್ಲಿ ಮದ್ಯ ಕುಡಿದು ಮತ್ತೊಮ್ಮೆ ಇಂಗಳದಾಳ ತಾಂಡಾದ ವಿದ್ಯಾರ್ಥಿನಿಯರನ್ನು ಚುಡಾಯಿಸಿ ನಾಪತ್ತೆಯಾಗಿದ್ದಾನೆ ಎಂದು ಅವರು ಅರೋಪಿಸಿದರು.

ನಂತರ ಬಾರ್ ಮುಂದೆ ಪಾಲಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಸಿಸಿಟಿವಿ ಕ್ಯಾಮೆರಾದ ವಿಡಿಯೊ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT