ಶುಕ್ರವಾರ, ಫೆಬ್ರವರಿ 28, 2020
19 °C
ಆಲ್ ಇಂಡಿಯಾ ಬಂಜಾರ ಸೇವಾ ಸಂಘಟನೆಯ ಪ್ರತಿಭಟನೆ

ಗಂಗಾವತಿ: ಭಾರಿ ವಾಹನ ಸಂಚಾರ ನಿಷೇಧಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಂಗಾವತಿ: ನಗರದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಗೂ ಎಚ್.ಜಿ.ರಾಮುಲು ಮನೆಯಿಂದ ಸಾಯಿಬಾಬಾ ದೇವಸ್ಥಾನದವರೆಗೂ ರಸ್ತೆ ಅಗಲೀಕರಣ ಮಾಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘಟನೆಯು ಬುಧವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ ವಿ.ಎಚ್.ಹೊರಪೇಟೆ ಅವರಿಗೆ ಮನವಿ ಸಲ್ಲಿಸಿತು.

ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಲಕ್ಷ್ಮಣ ನಾಯ್ಕ ಮಾತನಾಡಿ, ನಗರದ ಎಚ್.ಜಿ.ರಾಮುಲು ಅವರ ಮನೆಯಿಂದ ಸಾಯಿಬಾಬಾ ದೇವಸ್ಥಾನದವರೆಗೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೇ ಈ ರಸ್ತೆಯ ಮೇಲೆ ಇತ್ತಿಚೆಗೆ ಭಾರಿ ವಾಹನಗಳ ಓಡಾಟ ಹೆಚ್ಚಾಗಿ, ರಸ್ತೆಯು ಸಂಪೂರ್ಣ ಹದಗೆಟ್ಟಿದೆ ಎಂದರು.

ರಸ್ತೆ ಕಿರಿದಾಗಿರುವುದರಿಂದ ಅಪಘಾತಗಳು ಹೆಚ್ಚಿವೆ. ರಸ್ತೆಯಲ್ಲಿನ ಧೂಳು ಸಹ ಶಾಲಾ ಕಾಲೇಜುಗಳಿಗೆ ತೆರಳುವ ಮಕ್ಕಳನ್ನು ಹೈರಾಣಾಗಿಸಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ರಸ್ತೆ ಮೇಲೆ ಓಡಾಡುವ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಬೇಕು. ರಸ್ತೆಯನ್ನು ಅಗಲೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ನಗರದ ಸೇವಾಲಾಲ್ ವೃತ್ತದಲ್ಲಿ ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಿಲಾಯಿತು. ಪ್ರತಿಭಟನೆಗೆ ಬೇತೆಲ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಥ್ ನೀಡಿದರು.

ಈ ವೇಳೆ ಸಂಘಟನೆಯ ಪದಾಧಿಕಾರಿಗಳಾದ ಹನುಮಂತ, ಗಾಳೆಪ್ಪ, ಪ್ರಕಾಶ, ರಾಮು, ಮಂಜು ನಾಯಕ, ಶಿವಪ್ಪ, ವೆಂಕಟೇಶ್ ಜಾಧವ, ಕೃಷ್ಣ, ರವಿ ಚೌಹಾಣ್, ಸುರೇಶ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)