ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರಟಗಿ | ಪ್ರಚೋದನಕಾರಿ ಹೇಳಿಕೆ ಆರೋಪ; SDPIನ ಮೂವರ ವಿರುದ್ಧ ಎಫ್‌ಐಆರ್‌

Published : 17 ಸೆಪ್ಟೆಂಬರ್ 2024, 11:26 IST
Last Updated : 17 ಸೆಪ್ಟೆಂಬರ್ 2024, 11:26 IST
ಫಾಲೋ ಮಾಡಿ
Comments

ಕಾರಟಗಿ (ಕೊಪ್ಪಳ ಜಿಲ್ಲೆ): ವಕ್ಫ್‌ ಮಸೂದೆ ವಿರೋಧಿಸಿ ಎಸ್‌ಡಿಪಿಐ ಕಾರ್ಯಕರ್ತರು ಇತ್ತೀಚೆಗೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ವೇಳೆ ಹಿಂದೂ ಸಮಾಜದ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎನ್ನುವ ಕಾರಣಕ್ಕೆ ಸಂಘಟನೆಯ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸಂಘಟನೆಯ ಕಾರ್ಯದರ್ಶಿ ಇಮ್ರಾನ್‌, ಕನಕಗಿರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಜ್ಮೀರ ಸಿಂಗನಾಳ ಮತ್ತು ಉಪಾಧ್ಯಕ್ಷ ದಾವೂದ್‌ ವಿರುದ್ಧ ಕಾರಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೇಳಿಕೆಯೇನು?: ಸೆ. 13ರಂದು ಎಸ್‌ಡಿಪಿಐ ಪ್ರತಿಭಟನೆ ನಡೆಸುವಾಗ ಇಮ್ರಾನ್‌ ‘1992ರಲ್ಲಿ ಬಾಬ್ರಿ ಮಸೀದಿ ಘಟನೆ ಮತ್ತು 2002ರಲ್ಲಿ ಗುಜರಾತ್‌ನಲ್ಲಿ ನಡೆದ ಘಟನೆಯ ಪ್ರತಿಕಾರವಾಗಿ ವೀರಸಾವರ್ಕರರ ಸಂತತಿ ಮುಗಿಸುತ್ತೇವೆ. ಹಿಂದೂಗಳ ಗುರುವಾದ ನಾಗಪುರದಲ್ಲಿರುವ ವೀರ ಸಾರರ್ಕರ್‌ ಸಂತತಿಗಳು ಬಂದರೂ ಮುಸಲ್ಮಾನರ ವಕ್ಫ್‌ ಆಸ್ತಿ ಮುಟ್ಟಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು.

ಮುಸಲ್ಮಾನರು ಕಾರಟಗಿಯಲ್ಲಿ ಸಣ್ಣ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿರಬಹುದು. ನೆನಪಿರಲಿ ಇದೇ ದೇಶದಲ್ಲಿ ಎನ್‌ಆರ್‌ಸಿ ಕಾಯ್ದೆ ಬಂದಿತ್ತು. ಅದನ್ನು ನಮ್ಮ ಹೆಣ್ಣುಮಕ್ಕಳು ಒದ್ದು ತಿರಸ್ಕಾರ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಕಾರಟಗಿ ಮಂಡಲದ ಅಧ್ಯಕ್ಷ ಮಂಜುನಾಥ ಮಸ್ಕಿ ದೂರು ನೀಡಿದ್ದು ’ಎಸ್‌ಡಿಪಿಐ ಕಾರ್ಯಕರ್ತರ ವಿಷಕಾರಿ ಹೇಳಿಕೆ ರಾಷ್ಟ್ರೀಯ ಏಕತೆ, ಧಾರ್ಮಿಕತೆ ಮತ್ತು ಸೌಹಾರ್ದತೆ ನಾಶ ಮಾಡುತ್ತದೆ. ಧರ್ಮದ ಹೆಸರಿನಲ್ಲಿ ಕೋಮು ಸೌಹಾರ್ದತೆ ಪ್ರಚೋದಿಸುತ್ತದೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ದೂರು ನೀಡಿದ್ದರು.

ಈ ಘಟನೆ ಕುರಿತು ಕೊಪ್ಪಳದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ’ಸಮಾಜದ ಶಾಂತಿ ಕದಡಿದರೆ ಯಾವ ಸಂಘಟನೆಯಾದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ. ಎಸ್‌ಡಿಪಿಐ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT