ಶನಿವಾರ, ಜನವರಿ 28, 2023
18 °C

ಕೊಪ್ಪಳ | ಪ್ರೌಢಶಾಲೆಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ತಾಲ್ಲೂಕಿನ ಹಾಲವರ್ತಿ ಗ್ರಾಮದ ಪ್ರೌಢಶಾಲೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಬುಧವಾರ ಅಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್ಒ) ಸಂಘಟನೆ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಒ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಮಾತನಾಡಿ ‘ಪ್ರೌಢಶಾಲೆ ಆರಂಭವಾಗಿ ಐದಾರು ವರ್ಷಗಳಾದರೂ ಶೌಚಾಲಯ, ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ. ಶೌಚಾಲಯದ ಸಮಸ್ಯೆಯಿಂದಾಗಿ ಎಷ್ಟೋ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿಲ್ಲ. ಶುದ್ಧ ಕುಡಿಯುವ ನೀರು ಸಿಗದ ಕಾರಣ ಹತ್ತಿರದಲ್ಲೇ ಸಿಗುವ ಕಲುಷಿತ ನೀರೇ ಗತಿಯಾಗಿದೆ’ ಎಂದು ದೂರಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನಹರಿಸಿ ಕೂಡಲೇ ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಸಲ್ಲಿಸಿದರು. ಸಂಘಟನೆ ಸದಸ್ಯರಾದ ಅಶೋಕ್, ಶಂಕರ್, ಪ್ರದೀಪ್, ಉಷಾ, ಮನೋಜ್ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು