ಶುಕ್ರವಾರ, ಜುಲೈ 1, 2022
22 °C

ಎಬಿವಿಪಿ ಮೇಲಿನ ಲಾಠಿ ಪ್ರಹಾರ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ನಡೆಸಿದ ಪ್ರತಿಭಟನೆಯಲ್ಲಿ ಪೋಲಿಸ್ ಇಲಾಖೆ ಎಬಿವಿಪಿ ಕಾರ್ಯರ್ತರ ಮೇಲೆ ನಡೆಸಿದ ಲಾಠಿ ಪ್ರಹಾರವನ್ನು ತೀವ್ರವಾಗಿ ಖಂಡಿಸಲಾಗುತ್ತದೆ ಎಂದು ಜಿಲ್ಲಾ ಸಂಚಾಲಕ ಸರ್ವಜ್ಞ ಮೂರ್ತಿ ಎಂದರು.

ನಗರದ ತಹಶೀಲ್ದಾರ ಕಚೇರಿ ಆವರಣದಲ್ಲಿ ಮಂಗಳವಾರ ಎಬಿವಿಪಿ ಸಂಘಟನೆ ಕಾರ್ಯರ್ತರ ಮೇಲೆ ನಡೆದ ಲಾಠಿ ಪ್ರಹಾರವನ್ನು ವಿರೋಧಿಸಿ, ಪ್ರತಿಭಟನೆ ನಡೆಸಿ, ಮಾತನಾಡಿದರು.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ, ಮೌಲ್ಯಮಾಪನ, ಫಲಿತಾಂಶ, ಅಂಕಪಟ್ಟಿ ವಿತರಣೆ ಸೇರಿದಂತೆ ಇತರೆ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ.

ಆದರೆ ಪೋಲಿಸ್ ಇಲಾಖೆ ವಿದ್ಯಾರ್ಥಿಗಳ ಸಮಸ್ಯೆಗಳನ್ನ ಕಂಡರಿಯದೆ, ಪ್ರತಿಭಟನೆಯಲ್ಲಿ ನಿರತರಾದ ಎಬಿವಿಪಿ ಕಾರ್ಯಕರ್ತರ ಮೇಲೆ ಮನಬಂದಂತೆ ಲಾಠಿ ಪ್ರಹಾರ ಮಾಡಲಾಗಿದೆ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅನುಚಿತವಾಗಿ ವರ್ತಿಸಿದ ಪೊಲೀಸರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆಯಲ್ಲಿ ಸಂಘಟನೆಯ ಕಾರ್ಯರ್ಯತರು ಮತ್ತು ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ, ಕೂಡಲೆ ತಪ್ಪಿಸ್ಥರ ಮೇಲೆ ಕಠಿಣ ಕಾನೂನು ಕ್ರಮ‌ ಕೈಗೊಳ್ಳಬೇಕು. ಈ ಕುರಿತು ಸರ್ಕಾರ ನಿರ್ಲಕ್ಷ್ಯತನ ವಹಿಸಿದ್ದಲ್ಲಿ, ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ತಹಶೀಲ್ದಾರರ ಮೂಲಕ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ನಗರ ಕಾರ್ಯದರ್ಶಿ ಗಾಳೇಶ ರಾಥೋಡ, ಅಮರೇಶ, ಲಕ್ಷ್ಮಿ ಭೋಸ್ಲೆ, ದಸ್ತಗಿರಿ, ಪ್ರವೀಣ್ , ಭೂಮಿಕಾ, ಶೈಲಜಾ, ಪೂರ್ಣಚಂದ್ರ, ವಿಜಯ ಕುಮಾರ, ನಾಗರಾಜ, ಲಿಂಗರಾಜ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು