ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಡಿಗುಡ್ಡ: ಬಸ್ ಓಡಿಸಲು ಆಗ್ರಹ

ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಮನವಿ ಸಲ್ಲಿಕೆ
Last Updated 17 ಫೆಬ್ರುವರಿ 2022, 7:25 IST
ಅಕ್ಷರ ಗಾತ್ರ

ಕನಕಗಿರಿ: ಸಮೀಪದ ಕರಡಿಗುಡ್ಡ ಗ್ರಾಮಕ್ಕೆ ಬಸ್ ಓಡಿಸುವಂತೆ ಒತ್ತಾಯಿಸಿ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಕೊಪ್ಪಳದ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್ ಧನಂಜಯ ಮಾಲಗಿತ್ತಿ ಅವರಿಗೆ ಮನವಿ ಸಲ್ಲಿಸಿದರು.

ಸಮಿತಿ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ,‘ಕರಡಿಗುಡ್ಡ ಗ್ರಾಮ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಪ್ರೌಢಶಾಲೆ, ಪಿಯುಸಿ ಹಾಗೂ ಪದವಿ ಕಾಲೇಜಿಗೆ ಕನಕಗಿರಿ, ಗಂಗಾವತಿ, ಕೊಪ್ಪಳಕ್ಕೆ ನೂರಾರು ವಿದ್ಯಾರ್ಥಿಗಳು ಹೋಗುತ್ತಿದ್ದಾರೆ. ಬಸ್ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಇನ್ನಿಲ್ಲದ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ತಿಳಿಸಿದರು.

ಕರಡಿಗುಡ್ಡದ ಗ್ರಾಮಸ್ಥರು ಕೃಷಿ, ಹೈನಗಾರಿಕೆ, ಕೂಲಿ ಇತರೆ ಕೆಲಸಗಳನ್ನು ಮಾಡುತ್ತಾ ಜೀವನ ಸಾಗಿಸುತ್ತಿದ್ದು, ಬಸ್ ಸೌಲಭ್ಯವಿಲ್ಲದ ಕಾರಣ ತಮ್ಮ ಕೆಲಸ ಬಿಟ್ಟು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಂತಾಗಿದೆ ಎಂದು ಹೇಳಿದರು.

ಕರಡಿಗುಡ್ಡದ ಹನುಮಪ್ಪ ದೇವಸ್ಥಾನಕ್ಕೆ ದಿನಲೂ ನೂರಾರು ಭಕ್ತರು ಬರುತ್ತಿದ್ದಾರೆ. ಸಮರ್ಪಕ ರಸ್ತೆ ಹಾಗೂ ಸಾರಿಗೆ ಸೌಲಭ್ಯವಿಲ್ಲದಂತಾಗಿದೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೌಲಭ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ತಿಳಿಸಿದರು.

ಬಸ್ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ದಿನವೂ ಅಂದಾಜು 10 ಕಿಮೀ ದೂರ ನಡೆಯುವಂತಾಗಿದೆ. ಸಾರಿಗೆ ವ್ಯವಸ್ಥೆ ಇಲ್ಲದ ಪರಿಣಾಮ ಹೆಣ್ಣು ಮಕ್ಕಳ ಶಿಕ್ಷಣ ಕುಂಠಿತಗೊಳ್ಳುವಂತಾಗಿದೆ ಎಂದು ಅವರು ಹೇಳಿದರು.

ರಸ್ತೆ, ಸಾರಿಗೆ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಧನಂಜಯ ಮಾಲಗಿತ್ತಿ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರಮುಖರಾದ ಹನುಮಂತಪ್ಪ, ನಾಗೇಶ, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT