ಭಾನುವಾರ, ಸೆಪ್ಟೆಂಬರ್ 25, 2022
20 °C

ಆರೋಪ ಸಾಬೀತು; ಆರು ತಿಂಗಳು ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಯಲಬುರ್ಗಾ ತಾಲ್ಲೂಕಿನ ಬುಡುಕುಂಟಿ ಕ್ರಾಸ್‌ ಬಳಿ ವಾಹನವೊಂದರಲ್ಲಿ ಮಾದಕ ವಸ್ತು ಸಾಗಣೆ ಮಾಡುವಾಗ ಸಿಕ್ಕಿಬಿದ್ದಿದ್ದ ಪಂಜಾಬ್‌ನ ಮೋಹಿತ್‌ ಶರ್ಮಾ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾಗಿದ್ದು, ನ್ಯಾಯಾಲಯ ಆರು ತಿಂಗಳು ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.

2020ರ ಫೆಬ್ರುವರಿಯಲ್ಲಿ ಈ ಘಟನೆ ನಡೆದಿತ್ತು. ಕೊಪ್ಪಳ ಅಬಕಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್‌. ರೇಖಾ ಅವರು ಈ ತೀರ್ಪು ನೀಡಿದ್ದಾರೆ. ಕುಷ್ಟಗಿ ಅಬಕಾರಿ ನಿರೀಕ್ಷಕ ಚಾಂದಪಾಷ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು