ಕೊಪ್ಪಳ: ಯಾದಗಿರಿ ನಗರ ಪೊಲೀಸ್ ಠಾಣೆ ಪಿಎಸ್ಐ ಪರಶುರಾಮ್ ಸಾವಿನ ಬಗ್ಗೆ ತನಿಖೆ ನಡೆಯುತ್ತಿದ್ದು, ವಿಚಾರಣೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಮೃತಪಟ್ಟ ಪರಶುರಾಮ್ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮದವರು.
'ಪರಶುರಾಮ್ ನಮ್ಮ ಕ್ಷೇತ್ರದ ಹುಡುಗನೇ, ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ಮಾಧ್ಯಮಗಳಲ್ಲಿ ಭಿನ್ನವಾಗಿ ವರದಿ ಬರುತ್ತಿದೆ. ತನಿಖೆ ಬಳಿಕವಷ್ಟೇ ಸತ್ಯ ಗೊತ್ತಾಗಲಿದೆ ಎಂದರು