ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸಿ’

Last Updated 8 ನವೆಂಬರ್ 2020, 5:21 IST
ಅಕ್ಷರ ಗಾತ್ರ

ಯಲಬುರ್ಗಾ: ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗೊಳಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ದೊಡ್ಡದು. ಈ ಹಿನ್ನೆಲೆಯಲ್ಲಿ ಹೆಚ್ಚು ಕ್ರಿಯಾಶೀಲತೆ ಮುಖ್ಯ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಜಯರಾಂ ಚವ್ಹಾಣ ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ 3ನೇ ಹಂತದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳು ಹೆಚ್ಚು ಚಟುವಟಕೆಯಿಂದ ಆರೋಗ್ಯವಾಗಿ
ರುವಂತೆ ನೋಡಿಕೊಳ್ಳುವ ಜವಾಬ್ದಾರಿ ಕಾರ್ಯಕರ್ತೆಯರ ಮೇಲಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಶಾಲಾ ಪೂರ್ಣ ಶಿಕ್ಷಣ ಬಲವರ್ಧನಾ ಕಾರ್ಯಕ್ರಮ ಆಯೋಜಿಸಿದೆ ಎಂದರು.

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಉಮೇಶ ಹಿರೇಮಠ ಮಾತನಾಡಿ,‘ಮಕ್ಕಳ ಆರೋಗ್ಯದ ಜತೆಗೆ ಕಲಿಕಾ ಚಟುವಟಿಕೆಯು ಸರಿಯಾದ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳುವುದು ಅವಶ್ಯಕ’ ಎಂದರು.

ಸಿಡಿಪಿಒ ವಿರೂಪಾಕ್ಷಯ್ಯ ಮಾತನಾಡಿದರು.

ಅಂಗನವಾಡಿ ಕೇಂದ್ರದ ಹಿರಿಯ ಮೇಲ್ವಿಚಾರಕಿ ಲಲಿತಾ ನಾಯಕ ಮಾತನಾಡಿದರು. ಸರ್ಕಾರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ದುರಗಪ್ಪ, ಅಂಗವಾಡಿ ಮೇಲ್ವಿಚಾರಕರಾದ ಮಾಧವಿ ವೈದ್ಯ, ಚೆನ್ನಮ್ಮ ಶ್ಯಾನಭೋಗರ ಹಾಗೂ ಜಯಲಕ್ಷ್ಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT