ಕನಕಗಿರಿ: ಸಮೀಪದ ಬಂಕಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕ ಗವಿಸಿದ್ದಪ್ಪ ಅವರು ಸಾಮಾನ್ಯ ರಸಪ್ರಶ್ನೆ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಜಿಲ್ಲಾ ಪಂಚಾಯಿತಿ ಮೈಸೂರು, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಸಹಯೋಗದಲ್ಲಿ ಮೈಸೂರಿನಲ್ಲಿ ಸೋಮವಾರ ನಡೆದ ಶಿಕ್ಷಕರ ಸಹ ಪಠ್ಯ ಚಟುವಟಿಕೆಯ ಸಾಮಾನ್ಯ ರಸಪ್ರಶ್ನೆ ವಿಭಾಗದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಗವಿಸಿದ್ದಪ್ಪ ಅವರು ದ್ವಿತೀಯ ಸ್ಥಾನ ಪಡೆದು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಶಂಶಾದಬೇಗ್ಂ, ಹಾಗೂ ಪ್ರಧಾನ ಕಾರ್ಯದರ್ಶಿ ಉಮೇಶ ಕಂದಕೂರು ತಿಳಿಸಿದ್ದಾರೆ.