ಕೊಪ್ಪಳ: ಸತತವಾಗಿ ಮೂರು ಬಾರಿ ಶಾಸಕನಾಗಿದ್ದೇನೆ, ನನಗೂ ಸಚಿವ ಸ್ಥಾನ ಕೊಡಬೇಕು ಎಂದು ಕೊಪ್ಪಳ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ತಾಲ್ಲೂಕಿನ ಹುಲಿಗಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ ‘ಮನೆಗೆ ಬಂದು ಯಾರೂ ಸಚಿವ ಸ್ಥಾನ ಕೊಡುವುದಿಲ್ಲ. ಆದ್ದರಿಂದ ದೆಹಲಿಗೆ ಹೋಗಿ ನಾನೇ ಕೇಳಿದ್ದೇನೆ. ಅಧಿಕಾರ ಹಂಚಿಕೆ ಹಾಗೂ ಸಚಿವ ಸಂಪುಟ ವಿಸ್ತರಣೆ ಏನೇ ಆಗಬೇಕಾದರೂ ಪಕ್ಷದ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ. ನಮ್ಮ ಹೈಕಮಾಂಡ್ ಗಟ್ಟಿಯಾಗಿದೆ‘ ಎಂದರು.

‘ಹಲವು ಶಾಸಕರು ಸೇರಿ ದೆಹಲಿಗೆ ಹೋಗಿದ್ದೆವು. ಎಐಸಿಸಿ ಅಧ್ಯಕ್ಷರು ನಮ್ಮ ರಾಜ್ಯದವರೇ ಇದ್ದು ಅವರನ್ನು ಭೇಟಿಯಾಗಿದ್ದೇವೆ. ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ. ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಉಪಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರು ಹಾಗೂ ಶಾಸಕರು ಸಿ.ಎಂ. ಜೊತೆಗಿದ್ದೇವೆ’ ಎಂದರು.

ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ ‘ರಾಘವೇಂದ್ರ ಹಿಟ್ನಾಳ ಮೂರು ಬಾರಿ ಶಾಸಕರಾಗಿದ್ದು ಆಡಳಿತದಲ್ಲಿ ಅನುಭವ ಹೊಂದಿದ್ದಾರೆ. ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುವ ಶಕ್ತಿ ಸಹೋದರನಿಗೆ ಇದ್ದು ಸಚಿವ ಸ್ಥಾನ ನೀಡಬೇಕು’ ಎಂದು ಹೇಳಿದರು.

‘ನಮ್ಮ ಸಮುದಾಯಕ್ಕೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಬಗ್ಗೆ ಎಲ್ಲಿಯೂ ಹೇಳಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿ.ಎಂ. ಇರುತ್ತಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.