ಗಂಗಾವತಿ: ‘ಹೈದ್ರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದ ವತಿಯಿಂದ ರಾಯಚೂರಿನ ಕೊಠಾರಿ ಫಂಕ್ಷನ್ ಹಾಲಿನಲ್ಲಿ ಮೆ 24ರಂದು 371(ಜೆ) ಹೋರಾಟಗಾರರ ಸಮಾವೇಶ, ದುಂಡು ಮೇಜಿನ ಸಭೆ ಹಾಗೂ ಕಲ್ಯಾಣ ಕರ್ನಾಟಕ ವಿಕಾಸ ವೇದಿಕೆ ಸ್ಥಾಪನಾ ಸಮಾರಂಭ ಜರುಗಲಿದೆ ಹಮ್ಮಿಕೊಳ್ಳಲಾಗಿದೆ’ ಎಂದು ಹೈದ್ರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕ ಪ್ರದೇಶವೂ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾಗಿ ಹಲವು ವರ್ಷ ಕಳೆದರೂ ಅಭಿವೃದ್ಧಿ ಕನಸು ಇನ್ನೂ ನನಸಾಗಿಲ್ಲ. ಪ್ರಾದೇಶಿಕ ಅಸಮತೋಲನ ನಿವಾರಣೆಗೆ ರಚಿಸಲಾದ ನಂಜುಂಡಪ್ಪ ವರದಿ ಆಧಾರದಲ್ಲಿ ಸಾವಿರಾರು ಕೋಟಿ ಅನುದಾನ ಮಂಜೂರಾದರೂ, ಭ್ರಷ್ಟಾಚಾರದಿಂದ ಅಭಿವೃದ್ಧಿ ಕಾಮಗಾರಿಗಳು ನಿರೀಕ್ಷಿತ ಮಟ್ಟದಲ್ಲಿ ಜಾರಿಯಾಗಿಲ್ಲ’ ಎಂದರು

‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಳೆದ 12 ವರ್ಷಗಳಲ್ಲಿ ಸುಮಾರು ₹16 ಸಾವಿರ ಕೋಟಿ ವೆಚ್ಚ ಮಾಡಿರುವುದಾಗಿ ಹೇಳಿದೆ. 2022ರ ಸಿಎಜಿ ವರದಿ ಪ್ರಕಾರ ₹7 ಸಾವಿರ ಕೋಟಿಗೂ ಹೆಚ್ಚು ಅನುದಾನ ದುರುಪಯೋಗವಾಗಿದೆ ಎಂಬುದು ದಾಖಲಾಗಿದೆ’ ಎಂದರು.

‘2025-26ನೇ ಸಾಲಿನಲ್ಲಿ ಸರ್ಕಾರ ಘೋಷಿಸಿದ್ದ ₹5 ಸಾವಿರ ಕೋಟಿಯಲ್ಲಿ ಕೇವಲ ₹800 ಕೋಟಿ ಮಾತ್ರ ಕ್ರಿಯಾಯೋಜನೆ ಸಲ್ಲಿಕೆಯಾಗಿದೆ. ಉಳಿದ ಅನುದಾನ ಬಳಕೆಯಾಗದೇ ಉಳಿದಿದೆ. ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಂಖ್ಯಾ ಇಲಾಖೆ ಕಾರ್ಯದರ್ಶಿಯವರ ಪತ್ರದ ಮೂಲಕ ಈ ಸಂಗತಿ ಬಹಿರಂಗವಾಗಿದೆ ಎಂದು ಮಾಹಿತಿ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾಮಗಾರಿಗಳನ್ನು ಕೇಂದ್ರ ಸರ್ಕಾರದ ಡಬ್ಲೂಎಪಿಸಿಒಎಸ್ ಸಂಸ್ಥೆಯಿಂದ ಪರಿಶೀಲನೆ ನಡೆಸಬೇಕೆಂಬ ಆದೇಶ ಇದ್ದರೂ, ಅದನ್ನು ಪಾಲಿಸಲಾಗಿಲ್ಲ. ಪ್ರೊ.ಗೋವಿಂದರಾವ್ ವರದಿ ಪ್ರಕಾರ, ನಂಜುಂಡಪ್ಪ ವರದಿ ಜಾರಿಯಾದ ನಂತರವೂ ಈ ಭಾಗದ ಮಾನವಾಭಿವೃದ್ಧಿ ಸೂಚ್ಯಂಕ ಸುಧಾರಿಸುವ ಬದಲು ಕುಸಿದಿದೆ ಎಂದರು.

ಕಲ್ಯಾಣ ಕರ್ನಾಟಕದಲ್ಲಿ ಸುಮಾರು 30 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅದರಲ್ಲಿ 10 ಸಾವಿರಕ್ಕೂ ಹೆಚ್ಚು ಗಣಿತ ಮತ್ತು ವಿಜ್ಞಾನ ಶಿಕ್ಷಕರ ಕೊರತೆ ಇದೆ. ಶಿಕ್ಷಣದ ಗುಣಮಟ್ಟ ಕುಸಿದಿದ್ದು, ಸಾವಿರಾರು ಸರ್ಕಾರಿ ಶಾಲೆಗಳು ಮುಚ್ಚುವ ಪ್ರಯತ್ನ ನಡೆಯುತ್ತಿದೆ. ಶಿಕ್ಷಕರಿಲ್ಲದ ಶಾಲೆಗಳು, ವೈದ್ಯರಿಲ್ಲದ ಆಸ್ಪತ್ರೆಗಳು, ಉದ್ಯೋಗವಿಲ್ಲದೇ ಸಂಕಷ್ಟದಲ್ಲಿರುವ ಯುವಜನತೆ ಮತ್ತು ವಲಸೆ ಹೋಗುತ್ತಿರುವ ಗ್ರಾಮೀಣ ಜನರ ಪರಿಸ್ಥಿತಿಯ ಗಮನಿಸಿ ಮತ್ತೊಂದು ದೊಡ್ಡ ಹೋರಾಟದ ಅಗತ್ಯವಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಹೇಶ ಕುಮಾರ, ವೀರಣ್ಣ ಬಂಡಾರಿ, ಚೆನ್ನಬಸವ ಜೇಕಿನ್, ಪಂಪಣ್ಣ ನಾಯಕ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-35-2146390150

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.