ಜೂನ್ ತಿಂಗಳಲ್ಲಿ ಮಳೆ ಕೊರತೆಯಾಗಿದೆ. ಇದರಿಂದ ಕೆಲವು ಕಡೆ ಬಿತ್ತನೆಗೆ ಹಿನ್ನಡೆಯಾಗಿದೆ. ಕೆಲವರು ಬೆಳೆ ಕಿತ್ತು ಹಾಕಿದ್ದಾರೆ. ಜುಲೈನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.
ರುದ್ರೇಶಪ್ಪ ಟಿ.ಎಸ್. ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೊಪ್ಪಳ
ಮಳೆಗಾಗಿ ದೇವರ ಮೊರೆ
ಸಕಾಲಕ್ಕೆ ಮಳೆಯಾಗದ ಕಾರಣಕ್ಕೆ ರೈತರು ದೇವರ ಮೊರೆ ಹೋಗಿದ್ದಾರೆ. ಸಾಂಪ್ರದಾಯಿಕವಾಗಿ ಪಾಲಿಸಿಕೊಂಡು ಬಂದ ಗುರ್ಜಿ ಪೂಜೆ, ಹೊಲದ ಮಣ್ಣಿನಲ್ಲಿ ಈಶ್ವರ ಮತ್ತು ನಂದಿ ಮೂರ್ತಿಯನ್ನು ತಯಾರಿಸಿ, ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.