ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಷ್ಟಗಿ ತಾಲ್ಲೂಕಿನಾದ್ಯಂತ ಭಾರಿ ಮಳೆ: ತುಂಬಿದ ಹಳ್ಳಗಳು; ಮನೆಗಳಿಗೆ ಹಾನಿ

Published 7 ಜೂನ್ 2024, 16:08 IST
Last Updated 7 ಜೂನ್ 2024, 16:08 IST
ಅಕ್ಷರ ಗಾತ್ರ

ಕುಷ್ಟಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ಮತ್ತು ಶುಕ್ರವಾರ ಬೆಳಗಿನ ಜಾವ ಉತ್ತಮ ಮಳೆಯಾಗಿದೆ.

ಕಳೆದ ಒಂದು ವಾರದ ಅವಧಿಯಲ್ಲಿ ಆಗಿರುವ ಮಳೆಯಿಂದ ಮಣ್ಣಿನ ಮನೆಗಳು ಶಿಥಿಲಗೊಳ್ಳುತ್ತಿರುವುದು ಕಂಡುಬಂದಿದ್ದು ವಿವಿಧ ಗ್ರಾಮಗಳಲ್ಲಿ ಮನೆಗಳು ಕುಸಿದಿವೆ. ನಿರಲೂಟಿ, ಚಳಗೇರಾ, ಹುಲಿಯಾಪುರ ಇನ್ನೂ ಕೆಲ ಗ್ರಾಮಗಳಲ್ಲಿ ಮನೆಗಳು ಭಾಗಶಃ ಮತ್ತು ಹೆಚ್ಚಿನ ರೀತಿಯಲ್ಲಿ ಬಿದ್ದು ಹಾನಿಗೊಳಗಾಗಿವೆ. ಒಂದು ವಾರದ ಅವಧಿಯಲ್ಲಿ ಒಟ್ಟು 9 ಮನೆಗಳು ಬಿದ್ದಿರುವ ಬಗ್ಗೆ ಪ್ರಾಥಮಿಕ ವರದಿಗಳು ತಿಳಿಸಿವೆ.

ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ. ತಾಂತ್ರಿಕ ವರದಿ ಆಧಾರದ ಮೇಲೆ ಮನೆ ಹಾನಿಗೆ ಪರಿಹಾರ ನೀಡಲಾಗುತ್ತದೆ ಎಂದು ಕಂದಾಯ ಮೂಲಗಳು ತಿಳಿಸಿವೆ.

ಕುಷ್ಟಗಿ 15.8ಮಿ.ಮೀ, ಹನುಮಸಾರ 8.1 ಮಿ.ಮೀ, ಹನುಮನಾಳ 21.6, ದೋಟಿಹಾಳ 3.1, ಕಿಲಾರಟ್ಟಿ 22.2, ಮತ್ತು ತಾವರಗೇರಾದಲ್ಲಿ 56 ಮಿಮೀ ಮಳೆಯಾಗಿದೆ.

ತಾವರಗೇರಾ ಹೋಬಳಿ ವ್ಯಾಪ್ತಿಯ ಹಳ್ಳಿಗಳಲ್ಲಿ ಗುರುವಾರ ಸಂಜೆ ಅತಿ ಹೆಚ್ಚು ಮಳೆಯಾಗಿದ್ದರಿಂದ ಹೊಲದ ಒಡ್ಡುಗಳು ಒಡೆದು ಹಳ್ಳಗಳು ತುಂಬಿ ಹರಿದಿವೆ, ಕೃಷಿ ಹೊಂಡಗಳು ಭರ್ತಿಯಾಗಿವೆ ಮತ್ತು ಕೆರೆಗಳಿಗೂ ನೀರು ಹರಿದುಬರುತ್ತಿದೆ ಎಂಬುದು ಗೊತ್ತಾಗಿದೆ. ಅದೇ ರೀತಿ ಶುಕ್ರವಾರ ಸಂಜೆಯೂ ತಾಲ್ಲೂಕಿನ ಅನೇಕ ಭಾಗಗಳಲ್ಲಿ ಉತ್ತಮ ಮಳೆ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT