ಸೋಮವಾರ, ಜುಲೈ 4, 2022
22 °C

ಅಂಜನಾದ್ರಿಗೆ ಡಾ.ರಜನೀಶ್ ಗೋಯೆಲ್ ಭೇಟಿ: ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ತಾಲ್ಲೂಕಿನ ಅಂಜನಾದ್ರಿ ಪರ್ವತಕ್ಕೆ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಶನಿವಾರ ಭೇಟಿ ನೀಡಿದರು. ‌

ಕುಟುಂಬ ಸಮೇತರಾಗಿ ಬಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜನಾದ್ರಿ ಕೆಳಗಡೆ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಆರ್ಶೀವಾದ ಪಡೆದುಕೊಂಡರು.

ನಂತರ ಅಂಜನಾದ್ರಿ ಸಮೀಪದ ಐತಿಹಾಸಿಕ ಸ್ಥಳಗಳಾದ ಪಂಪಾ ಸರೋವರ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದರು.

ಪ್ರಭಾರ ತಹಶೀಲ್ದಾರ್ ವರ್ಣೀತ್ ನೇಗಿ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು