ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿ ಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಬಿಹಾರ ಮೂಲದ ವಿಕ್ಕಿ ರಾಮಶ್ರೀಪ್ರಸಾದ ಗುಪ್ತಾ ಎಂಬ ವ್ಯಕ್ತಿಯ ಮೇಲಿನ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಹಾಗೂಸೆಷನ್ಸ್ ನ್ಯಾಯಾಧೀಶ ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶ (ಪೋಕ್ಸೋ) ಶಂಕರ.ಎಂ.ಜಾಲವಾದಿ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಆರೋಪಿ ಕಲ್ಯಾಣಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಬಾಧಿತಳ ಸಹೋದರನಿಗೆ ಪರಿಚಯವಾಗಿ, ಮನೆಗೆ ಬಂದು ಹೋಗಿ ಮಾಡುತ್ತಿದ್ದರಿಂದ ಅಪ್ರಾಪ್ತೆಗೆ ಪರಿಚಯವಾಗಿ, ಇಬ್ಬರ ಮಧ್ಯೆ ಪ್ರೀತಿ ಬೆಳೆದು, 2017ರ ಏ.22 ರಂದು ಕಾರಟಗಿ ಠಾಣೆ ವ್ಯಾಪ್ತಿಯ ಸಿದ್ದಾಪುರ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಮದುವೆಯಾಗುವುದಾಗಿ ನಂಬಿಸಿ, ನೀನು ಬರದಿದ್ದರೆ ಸಾಯು ತ್ತೇನೆ ಎಂದು ಹೆದರಿಸಿ ಒತ್ತಾಯದಿಂದ ಅಪಹರಿಸಿಕೊಂಡು ಬೆಂಗಳೂರಿನ ಹೆಬ್ಬುಗೋಡೆಯ ವ್ಯಾಪ್ತಿಯಲ್ಲಿ ಶಿವರಾಜ ಎನ್ನುವವರ ಒಂದು ಕೊಠಡಿಯನ್ನು ಬಾಡಿಗೆ ಪಡೆದು ವಾಸವಾಗಿದ್ದನು. ಅಲ್ಲಿ ಅಪ್ರಾಪ್ತೆ ಇಚ್ಛೆಗೆ ವಿರುದ್ಧವಾಗಿ ಅತ್ಯಾ ಚಾರ ಎಸಗಿದ್ದು ಅಲ್ಲದೇ, ಜೀವ ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬಗ್ಗೆ ಗಂಗಾವತಿ ಗ್ರಾಮೀಣ ವೃತ್ತದ ಸಿಪಿಐ ದೀಪಕ್ ಆರ್.ಬೂಸರೆಡ್ಡಿ ಇವರು ತನಿಖೆ ಕೈಗೊಂಡು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹56 ಸಾವಿರ ದಂಡ ವಿಧಿಸಲಾಗಿದೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ಪ್ರಕರಣ ನಡೆಸಿ ವಾದ ಮಂಡಿ ಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.