ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ಬಾಲಕಿ ಮೇಲೆ ಅತ್ಯಾಚಾರ; ಹತ್ತು ವರ್ಷ ಜೈಲು

Published 23 ಮಾರ್ಚ್ 2024, 15:22 IST
Last Updated 23 ಮಾರ್ಚ್ 2024, 15:22 IST
ಅಕ್ಷರ ಗಾತ್ರ

ಕೊಪ್ಪಳ: ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಲಯ ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೊ) ತೀರ್ಪು ಪ್ರಕಟಿಸಿದೆ.

ತಾಲ್ಲೂಕಿನ ಮುನಿರಾಬಾದ್ ಪೊಲೀಸ್‌ ಠಾಣೆ ವ್ಯಾಪ್ತಿಯ ಹುಲಗಿಯ ಹುಲಿಗೆಮ್ಮ ದೇವಸ್ಥಾನ ಹತ್ತಿರ ಜಾತ್ರೆ ಸಲುವಾಗಿ ಹಾಕಲಾಗಿದ್ದ ಮನರಂಜನೆ ಆಟದ ತೊಟ್ಟಿಲು ಹತ್ತಿರ ಹಾಗೂ ರೈಲ್ವೆ ಹಳಿ ಪಕ್ಕದಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಆರಿಸುತ್ತಿದ್ದ ಬಾಲಕಿಯನ್ನು ಅಪಹರಿಸಿದ್ದ ಇಬ್ಬರು ಆರೋಪಿಗಳು ಐಸ್‌ಕ್ರೀಮ್‌, ಚಾಕೊಲೇಟ್‌ ನೀಡುವುದಾಗಿ ಆಮಿಷವೊಡ್ಡಿ ತುಂಗಭದ್ರಾ ಹೊಳೆ ಹಿಂದೆ ಹೊಸೂರು ರಸ್ತೆಯಲ್ಲಿರುವ ಕಬ್ಬಿನ ಗದ್ದೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು.

ಆಗಿನ ಕೊಪ್ಪಳ ಡಿವೈಎಸ್ಪಿ ಶ್ರೀಕಾಂತ ಕಟ್ಟಿಮನಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರಿಂದ ಮೊದಲ ಅಪರಾಧಿ ಶಬ್ಬೀರ ಮತ್ತು ಎರಡನೇ ಅಪರಾಧಿ ಕಾರ್ತಿಕ ಎಂಬುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ₹ 35 ಸಾವಿರ ದಂಡ ವಿಧಿಸಿ ಫೋಕ್ಸೊ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕಿ ಬಂಡಿ ಅಪರ್ಣಾ ಮನೋಹರ ವಾದ ಮಂಡಿಸಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT